ಬೆಂಗಳೂರು: ಹಾವೇರಿಯಲ್ಲಿ ಫೆಬ್ರವರಿ 26 ರಿಂದ 28 ರವರೆಗೆ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಸಮಿತಿ ತೀರ್ಮಾನಿಸಿದೆ.
ಕೊರೋನಾ ನಿಯಮ ಸಡಿಲಿಕೆ ಮಾಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲು ಮುಂದಾಗಿದೆ. ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ಕಾರ್ಯಕಾರಿ ಸಮಿತಿ ಸಭೆ ನಡೆದಿದ್ದು, ಫೆಬ್ರವರಿಯಲ್ಲಿ ಸಾಹಿತ್ಯ ಸಮ್ಮೇಳನ ನಡೆಸಲು ತೀರ್ಮಾನಿಸಲಾಗಿದೆ.
ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕೃಷಿ ಸಚಿವ ಬಿ.ಸಿ. ಪಾಟೀಲ್ ಮತ್ತು ಶಾಸಕ ನೆಹರೂ ಓಲೇಕಾರ್ ಅವರೊಂದಿಗೆ ಸಮಾಲೋಚನೆ ನಡೆಸಲಾಗಿದೆ. 2019 ರ ಜನವರಿಯಲ್ಲಿ 84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಧಾರವಾಡದಲ್ಲಿ ನಡೆದಿತ್ತು. 85 ನೇ ಸಮ್ಮೇಳನ 2020 ರ ಫೆಬ್ರವರಿ 1 ರಿಂದ ಕಲ್ಬುರ್ಗಿಯಲ್ಲಿ ನಡೆದಿತ್ತು. ಕೊರೋನಾ ಮಾರ್ಗಸೂಚಿ ಸಡಿಲಗೊಳಿಸಿ ಹಾವೇರಿ ಸಮ್ಮೇಳನಕ್ಕೆ ಅವಕಾಶ ನೀಡಲು ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ ತಿಳಿಸಿದ್ದಾರೆ.