ಬೆಂಗಳೂರು: ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ವಿಶೇಷ ಪ್ರತಿನಿಧಿಗಳ ನೋಂದಣಿ ಅವಧಿಯನ್ನು ಕನ್ನಡ ಸಾಹಿತ್ಯ ಪರಿಷತ್ ಡಿಸೆಂಬರ್ 7ರವರೆಗೆ ವಿಸ್ತರಿಸಿದೆ.
ಡಿಸೆಂಬರ್ 20, 21 ಮತ್ತು 22 ರಂದು ಸಮ್ಮೇಳನ ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ನೋಂದಣಿಗಾಗಿ ಆನ್ಲೈನ್ ವ್ಯವಸ್ಥೆ ಮಾಡಲಾಗಿದ್ದು, 5000 ಪ್ರತಿನಿಧಿಗಳಿಗೆ ಈ ಮೊದಲು ಅವಕಾಶ ಕಲ್ಪಿಸಿ ಡಿಸೆಂಬರ್ 5ರವರೆಗೆ ನೋಂದಣಿಗೆ ಅವಕಾಶ ನೀಡಲಾಗಿತ್ತು.
4077 ಮಂದಿ ಪ್ರತಿನಿಧಿಗಳಾಗಿ ನೋಂದಾಯಿಸಿಕೊಂಡಿದ್ದು, ಹೆಚ್ಚಿನ ಸಂಖ್ಯೆಯ ಜನ ಪ್ರತಿನಿಧಿ ನೋಂದಣಿಗೆ ಆಸಕ್ತಿ ತೋರಿಸುತ್ತಿದ್ದಾರೆ. ಹೀಗಾಗಿ ಸಂಬಂಧಿಸಿದ ಸಮಿತಿ ಮತ್ತು ಜಿಲ್ಲಾಡಳಿತಗಳೊಂದಿಗೆ ಚರ್ಚೆ ನಡೆಸಿ ಪ್ರತಿನಿಧಿಗಳ ಸಂಖ್ಯೆಯನ್ನು 6 ಸಾವಿರಕ್ಕೆ ನಿಗದಿಪಡಿಸಲಾಗಿದೆ ಎಂದು ಕಸಾಪ ಅಧ್ಯಕ್ಷ ಡಾ. ಮಹೇಶ್ ಜೋಶಿ ತಿಳಿಸಿದ್ದಾರೆ.
https://kannadasahithyaparishattu.in/sammelana2024/ ಲಿಂಕ್ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ಹೇಳಲಾಗಿದೆ.