ಹಾವೇರಿ: 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮೇ 20, 21, 22 ರಂದು ಹಾವೇರಿಯಲ್ಲಿ ನಡೆಸಲು ತಾತ್ಕಾಲಿಕ ದಿನಾಂಕವನ್ನು ನಿಗದಿಪಡಿಸಲಾಗಿದೆ.
ಕೊರೋನಾ ಕಾರಣಕ್ಕೆ ಮುಂದೂಡಿಕೆ ಮಾಡಲಾಗಿದ್ದ 86ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮೇ 20 ರಿಂದ ಮೂರು ದಿನ ನಡೆಸಲು ತಾತ್ಕಾಲಿಕ ದಿನಾಂಕ ನಿಗದಿಪಡಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಸಮಾಲೋಚನೆ ನಡೆಸಿ ಅಧಿಕೃತ ದಿನಾಂಕ ಪ್ರಕಟಿಸಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಷಿ ತಿಳಿಸಿದ್ದಾರೆ.