
ಬೆಂಗಳೂರು: ಕನ್ನಡ ಭಾಷಾಂತರಕ್ಕಾಗಿ ಹೊಸ ತಂತ್ರಾಂಶ ಅಭಿವೃದ್ಧಿ ಪಡಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ಭಾಷಣದಲ್ಲಿ ಘೋಷಿಸಿದ್ದಾರೆ.
ಕನ್ನಡ ಕಸ್ತೂರಿ ಎಂಬ ಹೊಸ ತಂತ್ರಾಂಶವನ್ನು ಅಭಿವೃದ್ಧಿ ಪಡಿಸಲಾಗುವುದು. ಈ ತಂತ್ರಾಂಶ ಭಾಷಾಂತರಕ್ಕೆ ಅನುಕೂಲವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ತಿಳಿಸಿದ್ದಾರೆ.
ಇನ್ನು ಆಡಳಿತ ವ್ಯವಸ್ಥೆ ಬಲಪಡಿಸಲು ತಂತಜ್ಞಾನವನ್ನು ಬಲಪಡಿಸಲಾಗುವುದು. ಕೃತಕ ಬುದ್ಧಿಮತ್ತೆ, ಮಿಷನ್ ಲರ್ನಿಂಗ್ ತಂತ್ರಜ್ಞಾನ ಬಳಕೆ ಮಾಡಲಾಗುವುದು ಎಂದು ಹೇಳಿದರು.