ಬೆಂಗಳೂರು: ರಾಜ್ಯದ ಖಾಸಗಿ ಕಂಪನಿಗಳಲ್ಲಿಯೂ ಕನ್ನಡಿಗರಿಗೆ ಮೀಸಲಾತಿ ಕಲ್ಪಿಸಲು ಸಂಪುಟ ಸಭೆ ಒಪ್ಪಿಗೆ ನೀಡಿದೆ. ಸಿ. ಡಿ. ದರ್ಜೆ ಉದ್ಯೋಗಗಳಲ್ಲಿ ಶೇ. 100ರಷ್ಟು ಹುದ್ದೆಗಳ ಮೀಸಲು ಕಲ್ಪಿಸುವ ವಿಧೇಯಕವನ್ನು ಅಧಿವೇಶನದಲ್ಲಿ ಮಂಡಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ರಾಜ್ಯದಲ್ಲಿನ ಎಲ್ಲಾ ಕೈಗಾರಿಕೆಗಳಲ್ಲಿಯೂ ಸಿ ಮತ್ತು ಡಿ ವರ್ಗದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಶೇ. 100ರಷ್ಟು ಮೀಸಲಾತಿ ಕಲ್ಪಿಸುವ ವಿಧೇಯಕವನ್ನು ಅಧಿವೇಶನದಲ್ಲಿ ಮಂಡಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಕಾರ್ಮಿಕ ಇಲಾಖೆ ವಿಷಧೇಯಕ ರೂಪಿಸಿದ್ದು, ಈ ಅಧಿವೇಶನದಲ್ಲಿ ಮಂಡಿಸಲಾಗುತ್ತದೆ. ರಾಜ್ಯದ ಉದ್ಯೋಗಗಳನ್ನು ಕನ್ನಡಿಗರಿಗೆ ದೊರಕಿಸಲು ಮೀಸಲಾತಿ ಕಲ್ಪಿಸುವ ಮೊದಲ ಕಾಯ್ದೆ ಇದಾಗಿದೆ.