ರಜೌರಿಯಲ್ಲಿ ‘ಕನ್ನಡಿಗ ಯೋಧ’ ಹುತಾತ್ಮ: ಇಂದು ಬೆಂಗಳೂರಿಗೆ ಪಾರ್ಥಿವ ಶರೀರ ಆಗಮನ

ರಜೌರಿ ಎನ್ ಕೌಂಟರ್ ನಲ್ಲಿ ಹುತಾತ್ಮರಾದ ಕನ್ನಡಿಗ ಯೋಧ ಕ್ಯಾಪ್ಟನ್ ಪ್ರಾಂಜಲ್ ಪಾರ್ಥಿವ ಶರೀರ ಇಂದು ಸಂಜೆ ಬೆಂಗಳೂರಿಗೆ ಬಂದಿಳಿಯಲಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಬುಧವಾರ ಸೇನೆ ಮತ್ತು ಉಗ್ರಗಾಮಿಗಳ ಮಧ್ಯೆ ನಡೆದ ಎನ್ಕೌಂಟರ್ನಲ್ಲಿ ಕರ್ನಾಟಕದ ಯೋಧ ಕ್ಯಾಪ್ಟನ್ ಪ್ರಾಂಜಲ್ (28) ಸೇರಿದಂತೆ ನಾಲ್ವರು ಹುತಾತ್ಮರಾಗಿದ್ದಾರೆ.

ಕಳೆದ ಎರಡು ವರ್ಷಗಳ ಹಿಂದೆಯಷ್ಟೇ ಪ್ರಾಂಜಲ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಅವರ ಪತ್ನಿ ಚೆನ್ನೈ ಐಐಟಿಯಲ್ಲಿ ಎಂಟೆಕ್ ಮಾಡುತ್ತಿದ್ದಾರೆ. ಪ್ರಾಂಜಲ್ ಹುತಾತ್ಮರಾದ ಸುದ್ದಿ ಕೇಳಿ ಅವರ ಕುಟುಂಬಕ್ಕೆ ದಿಗ್ಬ್ರಮೆ ಉಂಟಾಗಿದೆ.

ಹೆಚ್ಎಎಲ್ ಏರ್ಪೋರ್ಟ್ಗೆ ಬರಲಿರುವ ಪ್ರಾಂಜಲ್ ಪಾರ್ಥಿವ ಶರೀರಕ್ಕೆ ಸರ್ಕಾರ ವತಿಯಿಂದ ಗೌರವ ಸಲ್ಲಿಸಲಾಗುತ್ತದೆ. ನಂತರ ಬನ್ನೇರುಘಟ್ಟ ಸಮೀಪ ನಂದನವನ ಲೇಔಟ್ ನಿವಾಸಕ್ಕೆ ಪಾರ್ಥಿವ ಶರೀರವನ್ನು ಕೊಂಡೊಯ್ಯಲಾಗುತ್ತದೆ. ಸಿಬ್ಬಂದಿ ಮನೆಯ ಬಳಿ ಅಂತಿಮ ದರ್ಶನಕ್ಕೆ ಎಲ್ಲಾ ಸಿದ್ಧತೆ ಮಾಡುತ್ತಿದ್ದಾರೆ. ಸೋಮಸಂದ್ರಪಾಳ್ಯದ ವಿದ್ಯುತ್ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read