SHOCKING: ಜಮೀನಿಗೆ ಹೋಗುವಾಗ ಕಾಡು ಹಂದಿ ದಾಳಿಗೆ ರೈತ ಬಲಿ

ಕಣ್ಣೂರು: ಕೇರಳದ ಕಣ್ಣೂರು ಸಮೀಪದ ಪನೂರ್ ಬಳಿ ಕಾಡು ಹಂದಿ ದಾಳಿಗೆ ರೈತರೊಬ್ಬರು ಬಲಿಯಾಗಿದ್ದಾರೆ. ಶ್ರೀಧರನ್(70) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಭಾನುವಾರ ಬೆಳಿಗ್ಗೆ ತಮ್ಮ ಹೊಲಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಅವರ ಮೇಲೆ ಕಾಡು ಹಂದಿ ದಾಳಿ ಮಾಡಿದೆ‌. ಶ್ರೀಧರನ್ ಅವರ ಕೂಗಾಟ ಕೇಳಿದ ಸ್ಥಳೀಯರು ರಕ್ಷಣೆಗೆ ಧಾವಿಸಿದ್ದಾರೆ. ಅವರನ್ನು ರಕ್ಷಿಸಲು ಪ್ರಯತ್ನಿಸಿದ್ದಾರೆ. ಆದರೆ ಕಾಡು ಹಂದಿ ಗಂಭೀರವಾಗಿ ಗಾಯಗೊಳಿಸಿದ್ದರಿಂದ ಶ್ರೀಧರ್ ಮೃತಪಟ್ಟಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅರಣ್ಯ ಸಚಿವ ಎ.ಕೆ. ಶಶೀಂದ್ರನ್, ಘಟನೆಯ ಬಗ್ಗೆ ತಕ್ಷಣವೇ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read