ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಬೆಂಕಿ ಅವಘಡ ಘಟನೆ ಬೆನ್ನಲ್ಲೇ ಕಾನ್ಪುರದ ದಾದಾನಗರದಲ್ಲಿರುವ ಕೈಗಾರಿಕಾ ಪ್ರದೇಶದಲ್ಲಿಯೂ ಭಾರಿ ಬೆಂಕಿ ಅವಘಡ ಸಂಭವಿಸಿದೆ.
ಇಲ್ಲಿನ ಕೈಗಾರಿಕಾ ಪ್ರದೇಶದಲ್ಲಿನ ರಾಸಾಯನಿಕ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿಯ ಜ್ವಾಲೆ 10 ಅಡಿಗಳವರೆಗೆ ವ್ಯಾಪಿಸಿ ಧಗಧಗನೆ ಹೊತ್ತಿ ಉರಿದಿವೆ.
ಘಟನಾ ಸ್ಥಳಕ್ಕೆ ಹಲವಾರು ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, 1 ಗಂಟೆಗಳ ಕಾರ್ಯಾಚರಣೆ ಬಳಿಕ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ.