
ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬ ತನ್ನ ಪತ್ನಿಯ ಮೇಲೆ ಅತ್ಯಾಚಾರವೆಸಗಲು ಸ್ನೇಹಿತನಿಗೆ ಕುಮ್ಮಕ್ಕು ನೀಡಿದ್ದಲ್ಲದೆ ಇದನ್ನು ವಿಡಿಯೋ ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾನೆ.
ದೌರ್ಜನ್ಯಕ್ಕೊಳಗಾದ ಪತ್ನಿ ಈಗ ಪೊಲೀಸರಿಗೆ ದೂರು ನೀಡಿದ್ದು, ಇದೀಗ ಪತಿ ಮತ್ತು ಆತನ ಸ್ನೇಹಿತನನ್ನು ಬಂಧಿಸಲಾಗಿದೆ. ಈ ದಂಪತಿ ವಿವಾಹವಾಗಿ ಹಲವು ವರ್ಷಗಳೇ ಕಳೆದಿದ್ದರೂ ಮಕ್ಕಳು ಜನಿಸಿರಲಿಲ್ಲವೆಂದು ಹೇಳಲಾಗಿದೆ.
ಹೀಗಾಗಿ ಪತ್ನಿಯನ್ನು ಪದೇ ಪದೇ ಹಂಗಿಸುತ್ತಿದ್ದ ಪತಿ, ಇತ್ತೀಚೆಗೆ ತನ್ನ ಸ್ನೇಹಿತನನ್ನು ಮನೆಗೆ ಕರೆದುಕೊಂಡು ಬಂದಿದ್ದು ಪತ್ನಿ ಮೇಲೆ ಅತ್ಯಾಚಾರವೆಸಗಲು ಪ್ರೇರೇಪಿಸಿದ್ದಾನೆ. ಅಲ್ಲದೆ ಸ್ವತಃ ಈ ದೃಶ್ಯವನ್ನು ತನ್ನ ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾನೆ.
ಮಹಿಳೆ ಪ್ರತಿಭಟಿಸಿದಾಗ ಆಕೆಯ ಮೇಲೆ ಹಲ್ಲೆ ನಡೆಸಿ ಯಾರಿಗಾದರೂ ದೂರು ನೀಡಿದರೆ ಕೊಲೆ ಮಾಡುವುದಾಗಿ ಬೆದರಿಸಿದ್ದಾರೆ. ಕಡೆಗೆ ನೊಂದ ಮಹಿಳೆ ಪೊಲೀಸರಿಗೆ ದೂರು ನೀಡಿದ್ದು ಈಗ ಇಬ್ಬರನ್ನೂ ಬಂಧಿಸಲಾಗಿದೆ.