alex Certify BREAKING NEWS: ಟ್ರ್ಯಾಕ್ಟರ್ ಪಲ್ಟಿಯಾಗಿ ಭೀಕರ ಅಪಘಾತ: 22 ಭಕ್ತರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಟ್ರ್ಯಾಕ್ಟರ್ ಪಲ್ಟಿಯಾಗಿ ಭೀಕರ ಅಪಘಾತ: 22 ಭಕ್ತರು ಸಾವು

ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದ ಭೀಕರ ಅಪಘಾತದಲ್ಲಿ 22 ಭಕ್ತರು ಸಾವನ್ನಪ್ಪಿದ್ದಾರೆ. ಶನಿವಾರ ರಾತ್ರಿ ಕಾನ್ಪುರದಲ್ಲಿ ಭಾರೀ ಅವಘಡ ಸಂಭವಿಸಿದ್ದು, ಭಕ್ತರಿಂದ ತುಂಬಿದ್ದ ಟ್ರ್ಯಾಕ್ಟರ್ ಟ್ರಾಲಿ ಚಾಲಕನ ನಿಯಂತ್ರಣಕ್ಕೆ ಬಾರದೆ ಪಲ್ಟಿಯಾಗಿದೆ. ಮಾಹಿತಿಯ ಪ್ರಕಾರ, 22 ಜನರು ಸಾವನ್ನಪ್ಪಿದ್ದಾರೆ 2 ಡಜನ್ ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಉನ್ನಾವ್‌ ಚಂದ್ರಿಕಾ ದೇವಿ ದೇವಸ್ಥಾನದಿಂದ ದರ್ಶನ ಪಡೆದು ಕೊರ್ತಾ ಗ್ರಾಮಕ್ಕೆ ಭಕ್ತರು ಹಿಂತಿರುಗುತ್ತಿದ್ದ ವೇಳೆ ಸಾಡೆ ಪಟ್ಟಣದ ಗೌಶಾಲ ಬಳಿ ಈ ಘಟನೆ ನಡೆದಿದೆ. ಮಾಹಿತಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಆಗಮಿಸಿ ಸ್ಥಳೀಯರ ನೆರವಿನಿಂದ ಪೊಲೀಸರು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.

ಸಿಎಂ ಯೋಗಿ ಆದಿತ್ಯನಾಥ್ ಕೂಡ ಅಪಘಾತದ ಬಗ್ಗೆ ಮಾಹಿತಿ ಪಡೆದು ಕೂಡಲೇ ಸ್ಥಳಕ್ಕೆ ಆಗಮಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...