
ಶಿವಮೊಗ್ಗ: ಶಿವಮೊಗ್ಗ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿಯಿಂದ ಎಸ್.ಎನ್. ಚನ್ನಬಸಪ್ಪ ಅವರಿಗೆ ಟಿಕೆಟ್ ನೀಡಲಾಗಿದೆ. ಆಕಾಂಕ್ಷಿಯಾಗಿದ್ದ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರ ಪುತ್ರ ಕೆ.ಇ. ಕಾಂತೇಶ್ ಅವರಿಗೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವಂತೆ ಒತ್ತಾಯಿಸಲಾಗಿದೆ.
ಕಾಂತೇಶ್ ಅವರಿಗೆ ಟಿಕೆಟ್ ಕೈತಪ್ಪಿದ್ದು, ನನಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಅಭಿಮಾನಿಗಳಿಗೆ ಬೇಸರವಾಗಿದೆ ಎಂದು ಕಾಂತೇಶ್ ಹೇಳಿದ್ದಾರೆ.
ನನಗೆ ಟಿಕೆಟ್ ಸಿಗದಿರುವುದಕ್ಕೆ ಅಭಿಮಾನಿಗಳು ಕಣ್ಣೀರು ಹಾಕುತ್ತಿದ್ದು, ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವಂತೆ ಒತ್ತಾಯ ಮಾಡಿದ್ದಾರೆ. ತಂದೆ, ಸಂಘಟನೆ ಹೇಳಿದಂತೆ ನಾನು ಕೆಲಸ ಮಾಡುತ್ತೇನೆ. ಮುಂದಿನ ದಿನಗಳಲ್ಲಿ ಪಕ್ಷ ಜವಾಬ್ದಾರಿ ನೀಡುವ ವಿಶ್ವಾಸವಿದೆ. ಬರುವ ದಿನಗಳಲ್ಲಿ ಒಳ್ಳೆಯ ಅವಕಾಶ ಸಿಗುವ ವಿಶ್ವಾಸವಿದೆ ಎಂದು ಕಾಂತೇಶ್ ಹೇಳಿದ್ದಾರೆ.