alex Certify ಕರಗ ಮೆರವಣಿಗೆ ವೇಳೆ ಗಲಾಟೆ: ಯುವಕನ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕರಗ ಮೆರವಣಿಗೆ ವೇಳೆ ಗಲಾಟೆ: ಯುವಕನ ಹತ್ಯೆ

ಬೆಂಗಳೂರು: ವಿಶ್ವವಿಖ್ಯಾತ ಬೆಂಗಳೂರು ಕರಗ ಮಹೋತ್ಸವ ಮೆರವಣಿಗೆ ವೇಳೆ ಯುವಕರ ನಡುವೆ ಗಲಾಟೆ ಯಾಗಿದ್ದು, ಈ ಸಂದರ್ಭದಲ್ಲಿ ಹಲ್ಲೆಗೊಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಸಾವನ್ನಪ್ಪಿದ್ದಾರೆ.

ಡಿ. ಸಾರಥಿ ಮೃತಪಟ್ಟ ಯುವಕ. ಬೆಂಗಳೂರಿನ ಮೆಜೆಸ್ಟಿಕ್ ಸಮೀಪದ ಅಣ್ಣಮ್ಮ ದೇವಾಲಯದ ಬಳಿ ಕರಗ ಮಹೋತ್ಸವದ ವೇಳೆ ಯುವಕರ ನಡುವೆ ಗಲಾಟೆ ನಡೆದಿದ್ದು, ಶೇಷಾದ್ರಿಪುರಂ ನಿವಾಸಿ ಸಾರಥಿ ಅವರ ಮೇಲೆ ಹಲ್ಲೆ ನಡೆಸಲಾಗಿದೆ.

ದೇವಾಲಯದ ಮುಂದೆ ಡ್ಯಾನ್ಸ್ ಮಾಡುತ್ತಿದ್ದ ವ್ಯಕ್ತಿ ಸಾರಥಿ ಮತ್ತು ಸ್ನೇಹಿತರನ್ನು ಆಕಸ್ಮಿಕವಾಗಿ ಸ್ಪರ್ಶಿಸಿದ್ದರು. ಈ ವಿಚಾರಕ್ಕೆ ಗುಂಪುಗಳ ನಡುವೆ ಗಲಾಟೆ ನಡೆದು ಸಾರಥಿ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಆರೋಪಿಗಳು ಪರಾರಿಯಾಗಿದ್ದಾರೆ.

ಗಾಯಾಳು ಸಾರಥಿಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...