ಬೆಂಗಳೂರು: ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಆಚರಿಸುವ ಕರಗ ಉತ್ಸವಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ 3 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದಾರೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾವೇರಿ, ಶಿವಮೊಗ್ಗ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಚಿಕ್ಕಮಗಳೂರು, ಮಂಡ್ಯ, ಮೈಸೂರು, ಚಾಮರಾಜನಗರ ಮೊದಲಾದ ಜಿಲ್ಲೆಗಳಲ್ಲಿ ಆಯಾ, ತಾಲೂಕು, ಹೋಬಳಿ ಗ್ರಾಮಗಳಲ್ಲಿ ನಡೆಯುವ ಕರಗ ಉತ್ಸವಗಳಿಗೆ ಅನುದಾನ ಬಳಕೆ ಮಾಡಲು ತಿಳಿಸಲಾಗಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿ ನಡೆಯುವ ಕರಗ ಉತ್ಸವಗಳಿಗೆ ಅನುದಾನ ಬಿಡುಗಡೆ ಮಾಡುವಂತೆ ಆರ್ಥಿಕ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ನಡೆಯುವ ಕರಗ ಉತ್ಸವಗಳಿಗೆ ತಲಾ ಎರಡು ಲಕ್ಷದಂತೆ ಒಟ್ಟು ಮೂರು ಕೋಟಿ ರೂ. ಅನುದಾನ ಬಿಡುಗಡೆ ಮಾಡುವಂತೆ ವಿಧಾನ ಪರಿಷತ್ ಮಾಜಿ ಸದಸ್ಯ ಪಿ.ಆರ್. ರಮೇಶ್ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮನವಿ ಮಾಡಿದ್ದರು. ಅವರ ಮನವಿಯಂತೆ ಮುಖ್ಯಮಂತ್ರಿಗಳು ಅನುದಾನ ಮಂಜೂರು ಮಾಡಿದ್ದಾರೆ.