ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ರಾಜ್ಯದ ಎಲ್ಲಾ ಶಾಲೆಗಳ ವಿದ್ಯಾರ್ಥಿನಿಯರಿಗೆ ಕರಾಟೆ ಕಲಿಸಲು ತೀರ್ಮಾನಿಸಲಾಗಿದೆ. ಹೆಣ್ಣುಮಕ್ಕಳ ಸಬಲೀಕರಣದ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.
ಸಮಾಜಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದ್ದು, ಹೆಣ್ಣುಮಕ್ಕಳ ಸಬಲೀಕರಣ ಉದ್ದೇಶದಿಂದ ಮೆಟ್ರಿಕ್ ನಂತರದ ವಸತಿ ಶಾಲೆ ವಿದ್ಯಾರ್ಥಿನಿಯರಿಗೆ ಕರಾಟೆ ತರಬೇತಿ ನೀಡಲು ಸಮಾಜ ಕಲ್ಯಾಣ ಇಲಾಖೆ ಕ್ರಮ ಕೈಗೊಂಡಿದೆ.
ಮೊದಲಿಗೆ ಪ್ರತಿ ಜಿಲ್ಲೆಯ 10 ವಸತಿ ಶಾಲೆಗಳಲ್ಲಿ ಪ್ರಾಯೋಗಿಕವಾಗಿ ವಿದ್ಯಾರ್ಥಿನಿಯರಿಗೆ ಕರಾಟೆ ತರಬೇತಿ ನೀಡಲಿದ್ದು, ನಂತರ ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ರಾಜ್ಯದ ಎಲ್ಲಾ ಶಾಲೆಗಳ ವಿದ್ಯಾರ್ಥಿನಿಯರಿಗೆ ಕರಾಟೆ ಕಲಿಸಲಾಗುವುದು. ವಾರಕ್ಕೆ ಮೂರು ದಿನ ಕರಾಟೆ ತರಬೇತಿ ನೀಡಲಾಗುವುದು ಎನ್ನಲಾಗಿದೆ.