ಬೆಂಗಳೂರು : 2017 ರ ಪ್ರಕರಣ ಸಂಬಂಧ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣ ಗೌಡರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಕನ್ನಡ ನಾಮಫಲಕ ಕಡ್ಡಾಯಕ್ಕೆ ಒತ್ತಾಯಿಸಿ ಪ್ರತಿಭಟನೆ ತೀವ್ರ ಸ್ವರೂಪಗೊಂಡು, ಹಲವು ಹೋಟೆಲ್, ಅಂಗಡಿಗಳ ನಾಮಫಲಕ ಧ್ವಂಸಗೊಳಿಸಿದ ಪ್ರಕರಣದಲ್ಲಿ ಜೈಲು ಸೇರಿದ್ದ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣ ಗೌಡ ಎರಡು ದಿನಗಳ ಹಿಂದಷ್ಟೇ ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾಗಿದ್ದರು. ನಂತರ 2017 ರ ಆಸ್ತಿಪಾಸ್ತಿ ಹಾನಿ ಪ್ರಕರಣ ಸಂಬಂಧ ಪೊಲೀಸರು ಮತ್ತೆ ಅವರನ್ನು ವಶಕ್ಕೆ ಪಡೆದಿದ್ದರು.
ನಿನ್ನೆ ನಾರಾಯಣ ಗೌಡ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 30 ನೇ ಎಸಿಎಂಎಂ ನ್ಯಾಯಾಲಯ ಜಾಮೀನು ಅರ್ಜಿ ಆದೇಶವನ್ನು ಇಂದಿಗೆ ಕಾಯ್ದಿರಿಸಿ ಆದೇಶ ಹೊರಡಿಸಿತ್ತು. ಇದೀಗ ಕೋರ್ಟ್ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.