ಬೆಂಗಳೂರು: ನಾಮಫಲಕಗಳಲ್ಲಿ ಕನ್ನಡ ಕಡ್ಡಾಯಕ್ಕೆ ಆಗ್ರಹಿಸಿ ಡಿ.27ರಂದು ಕರವೇ ಕಾರ್ಯಕರ್ತರು ನಡೆಸಿದ್ದ ಪ್ರತಿಭಟನೆಗೆ ಸಂಬಂಧಿಸಿದಂತೆ 10 ಎಫ್ ಐ ಆರ್ ಗಳು ದಾಖಲಾಗಿವೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.
ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರ ಬಂಧನ ವಿಚಾರವಾಗಿ ಬೆಂಗಳೂರಿನಲ್ಲಿ ಮತನಾಡಿದ ಕಮಿಷ್ನರ್ ಬಿ.ದಯಾನಂದ್, ಕರವೇ ನಾರಾಯಣಗೌಡ ಸೇರಿದಂತೆ 53 ಜನರನ್ನು ಬಂಧಿಸಲಾಗಿದೆ. ಒಟ್ಟು 10 ಎಫ್ ಐ ಆರ್ ದಾಖಲಾಗಿದೆ ಎಂದರು.
ಯಾರೂ ಕೂಡ ಕಾನೂನು ಸುವ್ಯವಸ್ಥೆ ಕದಡುವ ಕೆಲಸ ಮಾಡಬಾರದು. ಕಾನೂನು ಉಲ್ಲಂಘಿಸಿದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.
ಇನ್ನು ಹೊಸ ವರ್ಷಾಚರಣೆಗೆ ಬೆಂಗಳೂರಿನಲ್ಲಿ ಕಟೆಚ್ಚರ ವಹಿಸಲಾಗಿದ್ದು, ಡ್ರಂಕ್ & ಡ್ರೈವ್ ಚಕ್ ಮಾಡಲಾಗುವುದು. ನಗರದಾದ್ಯಂತ 400 ಸಿಸಿಕ್ಯಾಮರಾ ಅಳವಡಿಸಲಾಗುವುದು ಎಂದು ತಿಳಿಸಿದರು.