ಬೆಂಗಳೂರು: ನಾಮಫಲಕಗಳಲ್ಲಿ ಕನ್ನಡ ಕಡ್ಡಾಯಕ್ಕೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನಡೆಸಿದ್ದ ಪ್ರತಿಭಟನೆಯಲ್ಲಿ ಬೋರ್ಡ್ ಗಳನ್ನು ಒಡೆದು ಆಕ್ರೋಶ ವ್ಯಕ್ತಪಡಿಸಿದ ಪ್ರಕರಣ ಸಂಬಂಧ ಇದೀಗ ಮತ್ತೆ ಮೂರು ಪ್ರಕರಣ ದಾಖಲಾಗಿದೆ.
ಅಂಗಡಿ ಮುಂಗಟ್ಟು, ಹೋಟೆಲ್ ಗಳ ಬೋರ್ಡ್ ಗಳನ್ನು ಒಡೆದು ಹಾಕಿದ್ದಕ್ಕೆ ಹೋಟೆಲ್ ಮಾಲೀಕರು ನೀಡಿರುವ ದೂರಿನ ಹಿನ್ನೆಲೆಯಲ್ಲಿ ಬೆಂಗಳೂರಿನ ಉತ್ತರ ತಾಲೂಕಿನ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಕಲಂ 143, 147, 120 (B) 283, 308, 353, 333 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಸಾದಹಳ್ಳಿ ಬ್ಲೂಂ ಹೋಟೆಲ್ ಸೇರಿದಂತೆ ಹಲವರು ನೀಡಿರುವ ದೂರಿನ ಮೇರೆಗೂ ಚಿಕ್ಕಜಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.