
ಕರಾವಳಿ ಜಿಲ್ಲೆಗಳಲ್ಲಿ ಎರಡು ದಿನ ಬಿಸಿ ಗಳಿ ಬೀಸಲಿದೆ. ಈ ಹಿನ್ನೆಲೆಯಲ್ಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಲರ್ಟ್ ಘೋಷಣೆ ಮಾಡಿದೆ.
ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಈ ಕುರಿತು ಪ್ರಕಟನೆ ಹೊರಡಿಸಿದೆ. ಕರಾವಳಿಯಲ್ಲಿ ಇಂದು ಹಾಗೂ ನಾಳೆ ಫೆ.27ರಂದು ಬಿಸಿ ಗಾಳಿ ಬೀಸಲಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಸೂಚಿಸಿದೆ. ಅಲ್ಲದೇ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.