alex Certify BIG NEWS: ಮತ್ತೆ ಕರಾವಳಿ, ಮಲೆನಾಡಿನಲ್ಲಿ ಹೆಚ್ಚಲಿದೆ ಮಳೆ ಅಬ್ಬರ: ಅಲರ್ಟ್ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮತ್ತೆ ಕರಾವಳಿ, ಮಲೆನಾಡಿನಲ್ಲಿ ಹೆಚ್ಚಲಿದೆ ಮಳೆ ಅಬ್ಬರ: ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ವರುಣಾರ್ಭಟ ಕಡಿಮೆಯಾಗಿದೆ. ಆದರೆ ಕರಾವಳಿ, ಮಲೆನಾಡು ಭಾಗದಲ್ಲಿ ಮತ್ತೆ ಮಳೆಯ ಅಬ್ಬರ ಹೆಚ್ಚಾಗುವ ಸಾದ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮುಂದಿನ ಒಂದು ವಾರಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು, ಮೈಸೂರು, ಮಂಡ್ಯ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾವೇರಿ, ಗದಗ, ಧಾರವಾಡ , ಉತ್ತರ ಕನ್ನಡ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಳಗಾವಿ, ಕಲಬುರ್ಗಿ, ಬೀದರ್, ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ವಿಜಯನಗರ, ಕೋಲಾರ ಜಿಲ್ಲೆಗಳಲ್ಲಿಯೂ ಮಳೆ ಸಾಧ್ಯತೆ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...