
ಬಾಲಿವುಡ್ ನಟಿ ಕರೀನಾ ಕಪೂರ್ ಖಾನ್ ತನ್ನ ನೋಟದಿಂದಲೇ ಅಭಿಮಾನಿಗಳನ್ನು ಬೆರಗುಗೊಳಿಸಿದ್ದಾರೆ. ಅಲ್ಲದೆ ನಟಿಯು ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿದ್ದಾರೆ. ಅಲ್ಲಿ ಅವರು ತಮ್ಮ ವೈಯಕ್ತಿಕ ಹಾಗೂ ವೃತ್ತಿಪರ ಜೀವನದ ಬಗ್ಗೆ ಹಂಚಿಕೊಳ್ಳುತ್ತಾರೆ.
ಸದ್ಯ, ಮಾಲ್ಡೀವ್ಸ್ ನಲ್ಲಿರುವ ಕರೀನಾ, ತನ್ನ ಪತಿ ಸೈಫ್ ಅಲಿ ಖಾನ್ ಅವರ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾರೆ. ಇತ್ತೀಚೆಗೆ ದ್ವೀಪ ರಾಷ್ಟ್ರದಲ್ಲಿ ತೆಗೆದಿರುವ ತಮ್ಮ ಫೋಟೋ ಹಂಚಿಕೊಂಡಿದ್ದು, ಸದ್ಯ ಭಾರಿ ವೈರಲ್ ಆಗಿದೆ.
ಶಬರಿಮಲೆಯಾತ್ರೆ ಸಂಬಂಧ ಮಹತ್ವದ ಆದೇಶ ಪ್ರಕಟಿಸಿದ ಕೇರಳ ಹೈಕೋರ್ಟ್
ಹೌದು, ನಟಿ ಇನ್ಸ್ಟಾಗ್ರಾಂನಲ್ಲಿ ತಮ್ಮ ಸೆಲ್ಫಿ ಫೋಟೋ ಹಂಚಿಕೊಂಡಿದ್ದಾರೆ. ಚಿತ್ರದಲ್ಲಿ ಕರೀನಾ ಕಪ್ಪು ಬಿಕಿನಿ ಧರಿಸಿದ್ದು, ಸೂರ್ಯ ಚುಂಬನದ ನೋಟವು ಅಭಿಮಾನಿಗಳ ಗಮನ ಸೆಳೆದಿದೆ.
ಸೆಲ್ಫಿ ಫೋಟೋ ಹಂಚಿ ‘ಬೀಚ್ ಬಮ್’ ಅಂತಾ ಶೀರ್ಷಿಕೆ ನೀಡಿದ್ದಾರೆ. ಇನ್ನು ಮಾಲ್ಡೀವ್ಸ್ ನಲ್ಲಿ ತನ್ನ ಪತಿ ಜತೆಗಿರುವ ಫೋಟೋ ಹಂಚಿಕೊಂಡಿರುವ ಕರೀನಾ, “ನನ್ನ ಜೀವನದ ಪ್ರೀತಿಗೆ ಜನ್ಮದಿನದ ಶುಭಾಶಯಗಳು. ನಿಮ್ಮೊಂದಿಗೆ ನಾನು ಬಯಸುವುದು ಇಷ್ಟನ್ನೇ” ಎಂದು ಬರೆದಿದ್ದಾರೆ.
