
ಬೆಂಗಳೂರು: ಕಾರ್ಯಕಳದಲ್ಲಿ ಯುವತಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಸುನೀಲ್ ಕುಮಾರ್ ಪ್ರತಿಕ್ರಿಯೆ ನೀಡಿದ್ದು, ಇದು ಪೂರ್ವನಿಯೋಜಿತ ಕೃತ್ಯವಾಗಿದೆ ಎಂದು ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಸುನೀಲ್ ಕುಮಾರ್, ಅನ್ಯಕೋಮಿನ ಯುವಕ ಹಿಂದೂ ಯುವತಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಇದು ಪೂರ್ವನಿಯೋಜಿತ ಕೃತ್ಯ. ಯುವತಿಯರು ಇಂತಹ ಘಟನೆಗಳ ಬಗ್ಗೆ ಎಚ್ಚರದಿಂದ ಇರಬೇಕು. ಹಿಂದೂ ಯುವತಿಯರು ಆಸೆ, ಆಮಿಷಗಳಿಗೆ ಒಳಗಾಗಬಾರದು ಎಂದರು.
ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಬೇಕು. ಲವ್ ಜಿಹಾದ್ ನಂತಹ ಪ್ರಕರಣಗಳ ಬಗ್ಗೆ ಸರ್ಕಾರ ಎಚ್ಚರವಹಿಸಬೇಕು. ಇಂತಹ ಕೃತ್ಯ ತಡೆಗಟ್ಟಲು ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.