ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಒಂದು ವಾರ ಮಳೆಯಾಗಲಿದೆ. ಇಂದು ರಾಜಧಾನಿ ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿಯೂ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ತಜ್ಞ ಪ್ರಸಾದ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಈವರೆಗೆ ಶೇ.22ರಷ್ಟು ಮಳೆಯಾಗಿದೆ. ಸೆಪ್ಟೆಂಬರ್ ತಿಂಗಳಲ್ಲಿ ವಾಡಿಕೆ ಮಳೆಯಾಗುವ ನಿರೀಕ್ಷೆ ಇದೆ ಎಂದು ಮಾಹಿತಿ ನೀಡಿದ್ದಾರೆ.