ಬೆಂಗಳೂರು: ರಾಜ್ಯದಲ್ಲಿರುವ 100 ರಾಮ ಮಂದಿರಗಳ ಜೀರ್ಣೋದ್ಧಾರಕ್ಕೆ ಮುಜರಾಯಿ ಇಲಾಖೆ ಮುಂದಾಗಿದ್ದು, ಈ ನಿಟ್ಟಿನಲ್ಲಿ ಬಜೆಟ್ ನಲ್ಲಿ ಅನುದಾನ ಘೋಷಣೆ ಮಾಡುವುದಾಗಿ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ, ರಾಜ್ಯದಲ್ಲಿರುವ 100 ರಾಮ ಮಂದಿರಗಳ ಜೋರ್ಣೋದ್ಧರಕ್ಕಾಗಿ ಮುಜರಾಯಿ ಇಲಾಖೆ 100 ಕೋಟಿ ರೂಪಾಯಿ ಅನುದಾನ ಮೀಸಲಿಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಬಜೆಟ್ ನಲ್ಲಿ ಅನುದಾನ ಘೋಷಣೆಯಾಗಲಿದೆ ಎಂದರು.
ನಮ್ಮ ಊರಿನಲ್ಲಿಯೂ ಹಲವು ರಾಮ ಮಂದಿರಗಳಿವೆ. ನಾವು ಆ ದೇವಸ್ಥಾನಗಳಿಗೆ ಭಕ್ತರಾಗಿ ಇಂದಿಗೂ ನಡೆದುಕೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಸಮಯದಲ್ಲಿ ಹೇಳಿದ್ದರು. ಅದರಂತೆ ಇದೀಗ ರಾಜ್ಯದಲ್ಲಿರುವ ರಾಮ ಮಂದಿರಗಳ ಅಭಿವೃದ್ಧಿಗೆ ಸರ್ಕಾರ ಮುಂದಾಗಿದೆ. ಈ ತಿಂಗಳ 16ರಂದು ಸಿಎಂ ಮಂಡಿಸಲಿರುವ ಬಜೆಟ್ ನಲ್ಲಿ ರಾಮ ಮಂದಿರ ಜೀರ್ಣೋದ್ಧಾರಕ್ಕೆ ಹಣ ಬಿಡುಗಡೆ ಘೋಷಣೆ ಮಾಡ್ತಾರಾ ಕಾದುನೋಡಬೇಕಿದೆ.