ಬೆಂಗಳೂರು: ರಣಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ ಸಮಾಧಾನಕರ ಸುದ್ದಿ. ರಾಜ್ಯದ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಕಹೆ ಮುನ್ಸೂಚನೆ ನೀಡಿದೆ.
ಇಂದಿನಿಂದ ಎರಡು ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗಲಿದ್ದು, 14 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೀದರ್, ಗದಗ, ಬಾಗಲಕೋಟೆ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ತುಮಕೂರು ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಕೊಡಗು, ಕೋಲಾರ, ಚಾಲರಾಜನಗರ,ತುಮಕೂರು, ವಿಜಯನಗರ, ಯಾದಗಿರಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಕಲಬುರ್ಗಿ, ಬೀದರ್ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಏಪ್ರಿಲ್ 9ರಂದು ಹಗುರ ಮಳೆಯಾಗುವ ಸಾಧ್ಯತೆ ಇದೆ.
ಆದರೆ ಮುಂದಿನ ಎರಡು ದಿನಗಳಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ತಾಪಮಾನ ಇನ್ನಷ್ಟು ಹೆಚ್ಚಾಗಲಿದೆ. ಇನ್ನು ಕಲಬುರ್ಗಿ, ಕೊಪ್ಪಳ, ಹಾವೇರಿ, ಗದಗ, ರಾಯಚೂರು, ಯಾದಗಿರಿ, ವಿಜಯಪುರ, ವಿಜಯನಗರ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಉಷ್ಣ ಅಲೆ ಬೀಸಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.