ಚಿಕ್ಕಮಗಳೂರು : ಕನ್ನಡಿಗರ ಮೇಲೆ ಹಲ್ಲೆ, ದೌರ್ಜನ್ಯ, ಮರಾಠಿ ಪುಂಡರಿಂದ ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಖಂಡಿಸಿ ಹಾಗೂ ಮೇಕೆದಾಟು ಸೇರಿದಂತೆ ಹಲವು ನೀರಾವರಿ ಯೋಜನೆ ಜಾರಿಗೆ ಆಗ್ರಹಿಸಿ ಕನ್ನಡ ಪರ ಸಂಘಟನೆ ಹೋರಾಟಗಾರ ವಾಟಾಳ್ ನಾಗರಾಜ್ ಅಖಂಡ ಕರ್ನಾಟಕ ಬಂದ್ ಗೆ ಕರೆ ನೀಡಿದ್ದಾರೆ.
ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಬಂದ್ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ಕನ್ನಡ ಪರ ಹೋರಾಟಗಾರರು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಿದರು. ರಾಜ್ಯವ್ಯಾಪಿ ಬಂದ್ ನಿಂದ ಇತರ ಜಿಲ್ಲೆಗಳಲ್ಲಿಯೂ ಸೇವೆಯ ಮೇಲೆ ಪರಿಣಾಮ ಬೀರಿದೆ.
ತುಮಕೂರಿನಲ್ಲಿ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿ, ಹುಲ್ಲಿನ ಹೊರೆಯನ್ನು ಹೆಗಲ ಮೇಲೆ ಹೊತ್ತುಕೊಂಡು ಘೋಷಣೆಗಳನ್ನು ಕೂಗಿದವು. ಮರಾಠಿ ಮಾತನಾಡಲಿಲ್ಲ ಎಂಬ ಕಾರಣಕ್ಕೆ ಬೆಳಗಾವಿಯಲ್ಲಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿರುವುದನ್ನು ವಿರೋಧಿಸಿ ಈ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರು.
ಮರಾಠಿಯಲ್ಲಿ ಮಾತನಾಡಲಿಲ್ಲ ಎಂಬ ಕಾರಣಕ್ಕೆ ಬಸ್ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ ಕನ್ನಡ ಪರ ಹೋರಾಟಗಾರರು ಕರೆ ನೀಡಿರುವ ರಾಜ್ಯ ಬಂದ್ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.