ಬೆಂಗಳೂರು : ಸೆ.29 ರಂದು ನಾಳೆ ಕರೆ ನೀಡಿರುವ ಕರ್ನಾಟಕ ಬಂದ್ ಹಿನ್ನೆಲೆ ನಾಳೆ ನಿಗದಿಯಾಗಿದ್ದ ದಾವಣಗೆರೆ ವಿವಿ ಪರೀಕ್ಷೆಗಳು ಮುಂದೂಡಿಕೆಯಾಗಿದೆ.
ಸೆ.29ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ದಾವಣಗೆರೆ ವಿಶ್ವವಿದ್ಯಾಲಯ ಮುಂದೂಡಿದೆ. ಈ ಬಗ್ಗೆ ದಾವಣಗೆರೆ ವಿವಿ ಪರೀಕ್ಷಾಂಗ ಕುಲಸಚಿವ ಡಾ.ಕೆ.ಶಿವಶಂಕರ ಮಾಹಿತಿ ನೀಡಿದ್ದಾರೆ. ವಿವಿಯ ಸ್ನಾತಕೋತ್ತರ ಪದವಿ ಪರೀಕ್ಷೆ ಅ.1ರಂದು ನಡೆಸಲು ವಿಶ್ವವಿದ್ಯಾಲಯ ನಿರ್ಧರಿಸಿದೆ.
ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನು ಖಂಡಿಸಿ ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ. ಸೆ.29ರಂದು ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಕರ್ನಾಟಕ ಬಂದ್ಗೆ ಕರೆ ನೀಡಲಾಗಿದ್ದು, ವಿವಿಧ ಸಂಘಟನೆಗಳು ಬೆಂಬಲ ನೀಡಿದೆ.