
ಬೆಂಗಳೂರು: ಕರ್ನಾಟಕ ಬಂದ್ ವಿಚಾರವಾಗಿ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಮಿತಿ ಮೀರಿ ವರ್ತಿಸಿದರೆ ಅರೆಸ್ಟ್ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಕನರ್ನತಕ ಬಂದ್ ಗೆ ಕರೆ ನೀಡಿದ್ದಾರೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿಯೂ ಪ್ರತಿಭಟನೆ, ಬಂದ್ ಆರಂಭವಾಗಿದೆ. ಈವರೆಗೆ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ ಎಂದರು.
ಪ್ರತಿಭಟನೆ, ಹೋರಾಟ ಶಾಂತರೀತಿಯಲ್ಲಿ ಇರಲಿ. ಮಿತಿ ಮೀರಿ ವರ್ತಿಸಿದರೆ ಕ್ರಮ ಕೈಗೊಳ್ಳಬೇಕಾಗುತ್ತದೆ. ಎಲ್ಲಾ ಕಡೆಗಳಲ್ಲೂ ಪೊಲೀಸರಿಂದ ಪರಿಶೀಲನೆ ನಡೆದಿದೆ ಎಂದು ಹೇಳಿದರು.