alex Certify BIG UPDATE : ಸೆ.29 ರಂದು ಬೆಳಗ್ಗೆ 6 ರಿಂದ ಸಂಜೆ 6 ವರೆಗೆ ‘ಕರ್ನಾಟಕ ಬಂದ್’ : ವಾಟಾಳ್ ನಾಗರಾಜ್ ಸ್ಪಷ್ಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG UPDATE : ಸೆ.29 ರಂದು ಬೆಳಗ್ಗೆ 6 ರಿಂದ ಸಂಜೆ 6 ವರೆಗೆ ‘ಕರ್ನಾಟಕ ಬಂದ್’ : ವಾಟಾಳ್ ನಾಗರಾಜ್ ಸ್ಪಷ್ಟನೆ

ಬೆಂಗಳೂರು : ಸೆ.29 ರಂದು ಬೆಳಗ್ಗೆ 6 ರಿಂದ ಸಂಜೆ 6 ವರೆಗೆ ‘ಕರ್ನಾಟಕ ಬಂದ್’ ಗೆ ಕರೆ ನೀಡಲಾಗಿದೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಸ್ಪಷ್ಟನೆ ನೀಡಿದರು.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ವಾಟಾಳ್ ನಾಗರಾಜ್ ಸೆ.29 ರ ಕರ್ನಾಟಕ ಬಂದ್ ಗೆ ಬಹುತೇಕ ಬೆಂಬಲ ಸಿಕ್ಕಿದೆ. ಎಲ್ಲಾ ಸಂಘಟನೆಗಳು ಬೆಂಬಲ ನೀಡಿದೆ. ಸೆ.29 ರಂದು ಬೆಳಗ್ಗೆ 6 ರಿಂದ ಸಂಜೆ 6 ವರೆಗೆ ‘ಕರ್ನಾಟಕ ಬಂದ್’ ಗೆ ಕರೆ ನೀಡಲಾಗಿದೆ ಎಂದು ಸ್ಪಷ್ಟನೆ ನೀಡಿದರು.

ಟೌನ್ ಹಾಲ್ ನಿಂದ ಪ್ರೀಡಂ ಪಾರ್ಕ್ ವರೆಗೆ ಪ್ರತಿಭಟನೆ ನಡೆಯಲಿದೆ. ಟೋಲ್, ವಿಮಾನ, ಹೆದ್ದಾರಿ, ರೈಲು ಸೇವೆ ಸೇರಿದಂತೆ ಎಲ್ಲಾ ಬಂದ್ ಆಗಲಿದೆ ಎಂದರು.ತಮಿಳುನಾಡಿಗೆ ‘ಕಾವೇರಿ’ ನೀರು ಹರಿಸುತ್ತಿರುವುದನ್ನು ಖಂಡಿಸಿ ಸೆ.29 ಕ್ಕೆ ‘ಕರ್ನಾಟಕ ಬಂದ್’ಕರೆ ನೀಡಲಾಗಿದೆ.ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ಮಾಡುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಹಿರಿಯ ಚಳವಳಿಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...