ಬೆಂಗಳೂರು : ನಾಮಫಲಕಗಳಲ್ಲಿ ‘ಕನ್ನಡ ಕಡ್ಡಾಯ’ ಎಂಬ ಕಾನೂನು ಬರದಿದ್ದರೆ ಫೆಬ್ರವರಿ 2 ನೇ ವಾರದಲ್ಲಿ ರಾಜ್ಯ ಬಂದ್ ಮಾಡಲಾಗುವುದು ಎಂದು ಕನ್ನಡ ಪರ ಸಂಘಟನೆಗಳ ಮುಖ್ಯಸ್ಥ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.
ಶನಿವಾರ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದ ಅವರು ಕನ್ನಡ ನಾಮಫಲಕಗಳಿಗಾಗಿ ಹೋರಾಟ ನಡೆಸಿದ ನಾರಾಯಣ ಗೌಡರನ್ನು ಬಂಧಿಸಿರುವುದು ಖಂಡನೀಯ, ಇಲ್ಲವಾದಲ್ಲಿ ಸರ್ಕಾರದ ವಿರುದ್ಧ ನಿರಂತರ ಪ್ರತಿಭಟನೆ ನಡೆಯುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ನಾಮಫಲಕ ಕಡ್ಡಾಯ ಮಾಡುವ ಸಂಬಂಧ ಸಿಎಂ ಸಿದ್ದರಾಮಯ್ಯ ಸುಗ್ರೀವಾಜ್ಞೆ ಹೊರಡಿಸುವುದಾಗಿ ಹೇಳಿದ್ದಾರೆ. ಎಲ್ಲಾ ಅಂಗಡಿ, ಮಳಿಗೆ ಕಚೇರಿಗಳ ಫಲಕಗಳಲ್ಲಿ ಶೇ 60 ರಷ್ಟು ಕನ್ನಡ ನಿಯಮವನ್ನು ಸ್ವಯಂಪ್ರೇರಿತವಾಗಿ ಪಾಲಿಸಬೇಕು, ಇಲ್ಲವಾದಲ್ಲಿ ಫೆಬ್ರವರಿಯಲ್ಲಿ ಕರ್ನಾಟಕ ಬಂದ್ ಗೆ ಕರೆ ನೀಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.