
ಬೆಂಗಳೂರು: ಎಂಇಎಸ್, ಶಿವಸೇನೆ ಪುಂಡಾಟ ಖಂಡಿಸಿ, ಕನ್ನಡಿಗರ ಮೇಲೆ ಹಲ್ಲೆ ಖಂಡಿಸಿ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಒಂದೆಡೆ ಕನ್ನಡ ಪರ ಸಂಘಟನೆ ಕಾರ್ಯಕರ್ತರು ಮೆಟ್ರೋ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಬೆಂಗಳೂರಿನ ಮೆಜೆಸ್ಟಿಕ್ ನಲ್ಲಿ ಕನ್ನಡಪರ ಸಂಘಟನೆ ಹೋರಾಟಗಾರರು ಮೆಟ್ರೋ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ತಡೆಯೊಡ್ಡಿದ್ದಾರೆ.
ಬಸವೇಶ್ವರ ನಗರದಲ್ಲಿ ಕನ್ನಡ ಪರ ಸಂಘಟನೆಗಳು ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ಎಂಇಎಸ್, ಶಿವಸೇನೆಯನ್ನು ನಿಷೇಧ ಮಾಡಬೇಕು. ಕನ್ನಡಿಗರಿಗೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಬಸವೇಶ್ವರ ವೃತ್ತದಲ್ಲಿ ವಿವಿಧ ಕನ್ನಡ ಪರ ಸಂಘಟನೆ ಕಾರ್ಯಕರ್ತರು ಜಮಾವಣೆಗೊಲ್ಳುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಹಲವರನ್ನು ವಶಕ್ಕೆ ಪಡೆದಿದ್ದಾರೆ.
ಪ್ರತಿಭಟನಾ ನಿರತ ಕನ್ನಡಪರ ಸಂಘಟನೆ ಕಾರ್ಯಕರ್ತರನ್ನು ವಶಕ್ಕೆ ಪಡೆದು ವಾಹನಗಳಲ್ಲಿ ತುಂಬಿ ಕರೆದೊಯ್ದಿದ್ದಾರೆ.