
ಬೆಂಗಳೂರು: ಕನ್ನಡಿಗರ ಮೇಲೆ ಹಲ್ಲೆ, ದೌರ್ಜನ್ಯ, ಮರಾಠಿ ಪುಂಡರಿಂದ ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಖಂಡಿಸಿ ಹಾಗೂ ಮೇಕೆದಾಟು ಸೇರಿದಂತೆ ಹಲವು ನೀರಾವರಿ ಯೋಜನೆ ಜಾರಿಗೆ ಆಗ್ರಹಿಸಿ ಕನ್ನಡ ಪರ ಸಂಘಟನೆ ಹೋರಾಟಗಾರ ವಾಟಾಳ್ ನಾಗರಾಜ್ ಮಾರ್ಚ್ 22ರಂದು ಅಖಂಡ ಕರ್ನಾಟಕ ಬಂದ್ ಗೆ ಕರೆ ನೀಡಿದ್ದಾರೆ.
ಮಾರ್ಚ್ 22ರಂದು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಕೆಲ ಸಂಘಟನೆಗಳು ಬೆಂಬಲ ಘೋಷಿಸಿದ್ದರೆ, ಇನ್ನು ಕೆಲ ಸಂಘಟನೆಗಳು ನೈತಿಕ ಬೆಂಬಲ ಮಾತ್ರ ಘೋಷಿಸಿಸಿದ್ದಾರೆ. ಬಂದ್ ಮಾಡಲ್ಲ ಎಂದಿದ್ದಾರೆ.
ಆಟೋ ಚಾಲಕರ ಸಂಘಟನೆ ಬಂದ್ ಗೆ ಬೆಂಬಲ ಘೋಷಿಸಿದೆ. ಹೋಟೆಲ್ ಮಾಲೀಕರ ಸಂಘ ಬಂದ್ ಗೆ ನೈತಿಕ ಬೆಂಬಲ ಮಾತ್ರ ಘೋಷಿಸಿದೆ. ಹೋರಟಕ್ಕೆ ಬೆಂಬಲಿಸುತ್ತೇವೆ. ಆದರೆ ಹೋಟೆಲ್ ಬಂದ್ ಮಾಡಲ್ಲ. ಆಹಾರ ಎಲ್ಲರಿಗೂ ಮುಖ್ಯ ಅಲ್ಲದೇ ಬಂದ್ ಮಾಡಿದರೆ ಇಡೀ ದಿನ ಹೋಟೆಲ್ ನಷ್ಟ ಅನುಭವಿಸಬೇಕಾಗುತ್ತದೆ. ಇದರಿಂದ ತೊಂದರೆಯಾಗುತ್ತದೆ. ಹಾಗಾಗಿ ಹೋಟೆಲ್ ಬಂದ್ ಇಲ್ಲ. ಹೋರಾಟ ಬೆಂಬಲಿಸುತ್ತೇವೆ ಎಂದು ತಿಳಿಸಿದೆ.
ಖಾಸಗಿ ಶಾಲೆಗಳ ಒಕ್ಕೂಟ ಕರ್ನಾಟಕ ಬಂದ್ ಗೆ ಬೆಂಬಲ ನೀಡಿಲ್ಲ. ಮಕ್ಕಳಿಗೆ ಪರೀಕ್ಷೆ ನಡೆಯುತ್ತಿದೆ. ಮುಂದಿನ ತರಗತಿಗಳಿಗೆ ಸಿದ್ಧತೆ ಮಾಡಿಕೊಳ್ಳಬೇಕಾದ ಸಂದರ್ಭ ಹಾಗಾಗಿ ಬಂದ್ ಗೆ ನಮ್ಮ ಬೆಂಬಲವಿಲ್ಲ ಎಂದಿದೆ.
ಇನ್ನು ಕರವೇ ಪ್ರವೀಣ್ ಶೆಟ್ಟಿ ಬಣ ನಾವು ಕರ್ನಾಟಕ ಬಂದ್ ಗೆ ಬೆಂಬಲ ನೀಡಲ್ಲ, ನಾವು ಮೇಕೆದಾಟು ಯೋಜನೆಗಾಗಿ ಹೋರಾಟಕ್ಕೆ ಬೆಂಬಲಿಸುತ್ತೇವೆ ಎಂದಿದ್ದಾರೆ. ಒಟ್ಟಾರೆ ಮಾರ್ಚ್ 22 ಶನಿವಾರ ಕರೆ ನೀಡಿರುವ ಕರ್ನಾಟಕ ಬಂದ್ ಗೆ ಕೆಲ ಸಂಘಟನೆಗಳು ಬೆಂಬಲ ಘೋಷಿಸಿಲ್ಲ.