ಬೆಂಗಳೂರು : ಮಾ.22 ರಂದು ಕರ್ನಾಟಕ ಬಂದ್ ಗೆ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದು, ನಿಗದಿಯಾಗಿರುವ ಪರೀಕ್ಷೆ ಬಗ್ಗೆ ವಿದ್ಯಾರ್ಥಿಗಳಲ್ಲಿ ಗೊಂದಲ ಮನೆ ಮಾಡಿದೆ. ನಿಗದಿಯಾಗಿರುವ ಯಾವುದೇ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲು ಸಾಧ್ಯವಿಲ್ಲ ಎಂದು ಸಚಿವ ಮಧು ಬಂಗಾರಪ್ಪ ಸ್ಪಷ್ಟ್ನೆ ನೀಡಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಮಾ.22 ರಂದು 7,8,9 ನೇ ತರಗತಿ ಪರೀಕ್ಷೆ ನಿಗದಿಯಾಗಿದೆ. ಬಂದ್ ಅಂತ ಪರೀಕ್ಷೆ ಮುಂದೂಡಲು ಆಗಲ್ಲ. ಪರೀಕ್ಷೆ ನಿಗದಿಯಂತೆ ನಡೆಯಲಿದೆ ಎಂದರು.
ನಿಗದಿಯಾಗಿರುವ 7,8,9 ನೇ ತರಗತಿ ಪರೀಕ್ಷೆ ನಡೆಯಲಿದೆ. ಮಕ್ಕಳು ಪರೀಕ್ಷೆ ಬರೆಯಲಿ. ಈಗಾಗಲೇ ವೇಳಾಪಟ್ಟಿ ಸಿದ್ದತೆ ಮಾಡಿ ಪ್ರಕಟ ಮಾಡಿದ್ದೇವೆ. ಮಕ್ಕಳ ಹಿತದೃಷ್ಟಿಯಿಂದ ಪರೀಕ್ಷೆ ಮುಂದೂಡಿಕೆ ಸರಿಯಲ್ಲ ಎಂದು ಅವರು ಹೇಳಿದರು.