ಬೆಂಗಳೂರು: ನಾಳಿನ ಕರ್ನಾಟಕ ಬಂದ್ ವಾಪಸ್ ಪಡೆದ ಹೋರಾಟಗಾರರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಧನ್ಯವಾದ ಹೇಳಿದ್ದಾರೆ.
ಇಂದು ಕನ್ನಡ ಪರ ಹೋರಾಟಗಾರರಾದ ವಾಟಾಳ್ ನಾಗರಾಜ್, ಸಾ.ರಾ. ಗೋವಿಂದ್, ಪ್ರವೀಣ್ ಶೆಟ್ಟಿ ಸೇರಿದಂತೆ ಹಲವು ನಾಯಕರೊಂದಿಗೆ ಸಭೆ ನಡೆಸಿದ ಸಿಎಂ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಿಎಂ ಮನವಿ ಮೇರೆಗೆ ಹೋರಾಟಗಾರರು ಕರ್ನಾಟಕ ಬಂದ್ ಕೈಬಿಟ್ಟಿದ್ದಾರೆ.
ಮನವಿಯ ಮೇರೆಗೆ ಬಂದ್ ಹಿಂಪಡೆಯಲಾಗಿದೆ. ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಬದ್ಧವಾಗಿದೆ. ನನ್ನ ಮನವಿಗೆ ಹೋರಾಟಗಾರರು ಬಂದ್ ವಾಪಸ್ ಪಡೆದಿದ್ದಾರೆ. ಇದಕ್ಕಾಗಿ ಹೋರಾಟಗಾರರಿಗೆ ಧನ್ಯವಾದಗಳು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸಂಧಾನ ಸಭೆ ಯಶಸ್ವಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಬಂದ್ ಹಿಂಪಡೆದ ಹೋರಾಟಗಾರರಿಗೆ ಧನ್ಯವಾದಗಳು. ನಾಳೆ ಬಂದ್ ಇರುವುದಿಲ್ಲ. ಎಂದಿನಂತೆ ಜನಜೀವನ ಇರಲಿದೆ ಎಂದಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಡೆಸಿದ ಸಂಧಾನ ಯಶಸ್ವಿಯಾಗಿದೆ. ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ಹಿಂಪಡೆಯಲಾಗಿದೆ. ಸಭೆಯ ನಂತರ ಮಾತನಾಡಿದ ವಾಟಾಳ್ ನಾಗರಾಜ್, ಸಾ.ರಾ. ಗೋವಿಂದ್ ಅವರು, ಬಂದ್ ಹಿಂಪಡೆಯಲಾಗಿದೆ ಎಂದು ತಿಳಿಸಿದ್ದಾರೆ.
ಮುಂದಿನ ದಿನಗಳಲ್ಲಿ ಕರ್ನಾಟಕ ಬಂದ್ ನಡೆಸುವುದು ಖಚಿತವೆಂದು ಕನ್ನಡಪರ ಹೋರಾಟಗಾರ ಸಾ.ರಾ. ಗೋವಿಂದು ಹೇಳಿದ್ದಾರೆ. ಸಿಎಂ ಜೊತೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಎಂಇಎಸ್ ನಿಷೇಧ ಮಾಡುವ ಬಗ್ಗೆ ಸಿಎಂ ಕಾಲಾವಕಾಶ ಕೇಳಿದ್ದಾರೆ. ಕಾನೂನು ತಜ್ಞರೊಂದಿಗೆ ಚರ್ಚೆ ನಡೆಸಲಾಗುತ್ತದೆ. ಹೀಗಾಗಿ ನಾಳೆ ಬಂದ್ ಮುಂದೂಡಲು ಉತ್ತರಿಸಿದ್ದೇವೆ. ಶೀಘ್ರವೇ ಸಭೆ ನಡೆಸಿ ಮುಂದಿನ ಹೋರಾಟದ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ. ನಾಳೆ ಬೆಳಗ್ಗೆ 10.30 ಕ್ಕೆ ಟೌನ್ ಹಾಲ್ ನಿಂದ ಫ್ರೀಡಂ ಪಾರ್ಕ್ ವರೆಗೆ ಮೆರವಣಿಗೆ, ಧರಣಿ ನಡೆಸಲಾಗುವುದು ಎಂದು ಹೇಳಿದ್ದಾರೆ.
ವಾಟಾಳ್ ನಾಗರಾಜ್ ಮಾತನಾಡಿ, ನಾಳೆ ಬಂದ್ ಇರುವುದಿಲ್ಲ. ಸಾಂಕೇತಿಕವಾಗಿ ಧರಣಿ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.