ಬೆಂಗಳೂರು : ಕನ್ನಡಿಗರ ಮೇಲೆ ಹಲ್ಲೆ, ದೌರ್ಜನ್ಯ, ಮರಾಠಿ ಪುಂಡರಿಂದ ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಖಂಡಿಸಿ ಹಾಗೂ ಮೇಕೆದಾಟು ಸೇರಿದಂತೆ ಹಲವು ನೀರಾವರಿ ಯೋಜನೆ ಜಾರಿಗೆ ಆಗ್ರಹಿಸಿ ಕನ್ನಡ ಪರ ಸಂಘಟನೆ ಹೋರಾಟಗಾರ ವಾಟಾಳ್ ನಾಗರಾಜ್ ಅಖಂಡ ಕರ್ನಾಟಕ ಬಂದ್ ಗೆ ಕರೆ ನೀಡಿದ್ದಾರೆ.
ಕರ್ನಾಟಕ ಬಂದ್ ಹಿನ್ನೆಲೆ ಬೆಂಗಳೂರಿನ ರಸ್ತೆಗಳು ಖಾಲಿ ಖಾಲಿ ಆಗಿದೆ. ಬೆಳಗಾವಿಯಲ್ಲಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿ ಕನ್ನಡ ಪರ ಸಂಘಟನೆಗಳು ರಾಜ್ಯ ಬಂದ್ ಗೆ ಕರೆ ನೀಡಿದ್ದರಿಂದ ಬೆಂಗಳೂರಿನಲ್ಲಿ ರಸ್ತೆಗಳು ನಿರ್ಜನವಾಗಿದ್ದವು. ಅಂಗಡಿಮುಂಗಟ್ಟುಗಳು ಬಂದ್ ಆಗಿದ್ದವು, ಜನ ಸಂಚಾರ ಕಂಡು ಬರಲಿಲ್ಲ.
ಶನಿವಾರ ರಾಜ್ಯವ್ಯಾಪಿ ಬಂದ್ ಇರುವುದರಿಂದ ಮಹಾರಾಷ್ಟ್ರ ಸಾರಿಗೆ ಬಸ್ಸುಗಳು ಕರ್ನಾಟಕವನ್ನು ಪ್ರವೇಶಿಸುತ್ತಿಲ್ಲ ಮತ್ತು ಗಡಿಯವರೆಗೆ ಮಾತ್ರ ಕಾರ್ಯನಿರ್ವಹಿಸುತ್ತಿವೆ. ಎರಡು ರಾಜ್ಯಗಳ ನಡುವಿನ ಉದ್ವಿಗ್ನತೆಯ ಮಧ್ಯೆ ಮುನ್ನೆಚ್ಚರಿಕೆಯಾಗಿ ಪೊಲೀಸರು ಎಲ್ಲಾ ಬಸ್ಸುಗಳನ್ನು ವಾಪಸ್ ಕಳುಹಿಸಿದ್ದಾರೆ.
VIDEO | Karnataka Bandh: Streets remain deserted in Bengaluru following a call by pro-Kannada groups for statewide shutdown in protest over alleged assault on a conductor of a state-run bus in Belagavi.
(Full video available on PTI Videos- https://t.co/dv5TRAShcC) pic.twitter.com/5qdbAIgg0E
— Press Trust of India (@PTI_News) March 22, 2025