ಬೆಂಗಳೂರು : ಕನ್ನಡಿಗರ ಮೇಲೆ ಹಲ್ಲೆ, ದೌರ್ಜನ್ಯ, ಮರಾಠಿ ಪುಂಡರಿಂದ ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಖಂಡಿಸಿ ಹಾಗೂ ಮೇಕೆದಾಟು ಸೇರಿದಂತೆ ಹಲವು ನೀರಾವರಿ ಯೋಜನೆ ಜಾರಿಗೆ ಆಗ್ರಹಿಸಿ ಕನ್ನಡ ಪರ ಸಂಘಟನೆ ಹೋರಾಟಗಾರ ವಾಟಾಳ್ ನಾಗರಾಜ್ ಅಖಂಡ ಕರ್ನಾಟಕ ಬಂದ್ ಗೆ ಕರೆ ನೀಡಿದ್ದು, ಬಂದ್ ತೀವ್ರಗೊಂಡಿದೆ.
ಬಂದ್ ನಡೆಸುತ್ತಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ವಶಕ್ಕೆ ಪಡೆದು ಬಸ್ ನಲ್ಲಿ ಕರೆದೊಯ್ದಿದ್ದಾರೆ. ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಟೌನ್ ಹಾಲ್ ಮುಂಭಾಗದಿಂದ ನಡೆಯಬೇಕಿದ್ದ ಪ್ರತಿಭಟನಾ ರ್ಯಾಲಿಗೆ ಪೊಲೀಸರು ತಡೆಯೊಡ್ಡಿದ್ದರು. ಮೆರವಣಿಗೆ ಆರಂಭಕ್ಕೂ ಮುನ್ನವೇ ಪೊಲೀಸರು ವಾಟಾಳ್ ನಾಗರಾಜ್, ಸಾರಾ.ಗೋವಿಂದು ಅವರನ್ನು ವಶಕ್ಕೆ ಪಡೆದಿದ್ದರು.
ಈ ವೇಳೆ ಮಾತನಾಡಿದ ವಾಟಾಳ್ ನಾಗರಾಜ್ ಸರ್ಕಾರದ, ಪೊಲೀಸರ ಗೂಂಡಾಗಿರಿಗೆ ನಾವು ಜಗ್ಗಲ್ಲ . ನೆಲ, ಜಲ ಭಾಷೆಗೆ ನಮ್ಮ ಹೋರಾಟ ನಿಲ್ಲಲ್ಲ. ಪೊಲೀಸರು ನಮ್ಮ ಪ್ರತಿಭಟನೆಯನ್ನು ಹತ್ತಿಕ್ಕುತ್ತಿದ್ದಾರೆ ಎಂದು ಗುಡುಗಿದರು. ನಾವು ಕರೆ ನೀಡಿದ್ದ ಕರ್ನಾಟಕ ಬಂದ್ ಯಶಸ್ವಿಯಾಗಿದೆ ಎಂದರು.