ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ಖಂಡಿಸಿ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು, ಬಂದ್ ಗೆ ಚಿತ್ರರಂಗದ ನಟ-ನಟಿಯರು ಸಾಥ್ ನೀಡಿದ್ದಾರೆ. ವಿವಿಧೆಡೆಗಳಲ್ಲಿ ಕನ್ನಡಪರ ಸಂಘಟನೆಗಳು ಬೀದಿಗಿಳಿದು ಹೋರಾಟ ನಡೆಸುತ್ತಿದ್ದು, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನೆಲಮಂಗಲದಲ್ಲಿ ಕನ್ನಡ ಪರ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಸ್ಯಾಂಡಲ್ ವುಡ್ ನಟ ವಿನೋದ್ ರಾಜ್ ಭಾಗಿಯಾಗಿದ್ದಾರೆ. ಕಾವೇರಿ ನೀರು ನಮ್ಮದು ಎಂದು ಘೋಷಣೆಗಳನ್ನು ಕೂಗಿದ್ದಾರೆ.
ಕನ್ನಡಪರ ಸಂಘಟನೆ ಕಾರ್ಯಕರ್ತರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಎಮ್ಮೆಗಳನ್ನು ಹಿಡಿದುಕೊಂಡು ಬಂದು ಪ್ರತಿಭಟನೆ ನಡೆಸಿದ್ದಾರೆ. ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಸಂಪೂರ್ಣ ಬಂದ್ ವಾತಾವರಣ ನಿರ್ಮಾಣವಾಗಿದೆ.