ಚಿಕ್ಕಮಗಳೂರು: ಕರ್ನಾಟಕ ಬ್ಯಾಂಕ್ ಶಾಖೆಯ ಎಟಿಎಂ ವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಚಿಕ್ಕಮಗಳೂರಿನ ಐಜಿ ರಸ್ತೆಯ ಸಾರಗೋಡು ಆರ್ಕೆಡ್ ಬಳಿ ನಡೆದಿದೆ.
ಬ್ಯಾಂಕ್ ನ ಶಾಖೆಯ ಕೆಳಭಾಗದಲ್ಲಿರುವ ಎಟಿಎಂ ಗೆ ಬೆಂಕಿ ಹೊತ್ತಿಕೊಂಡಿದ್ದು, 5 ಲಕ್ಷ ಹಣ, ಎಟಿಎಂ ಯಂತ್ರ ಸೇರಿದಂತೆ ಒಟ್ಟು 15 ಲಕ್ಷ ಮೌಲ್ಯದ ಎಟಿಎಂ ಸಂಪೂರ್ನ ಭಸ್ಮವಾಗಿದೆ.
ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಅವಘಡ ಸಂಭವಿಸಿದೆ ಎನ್ನಲಾಗಿದೆ. ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.