ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚನೆಯ ನಂತರವೂ ಮಹಾರಾಷ್ಟ್ರ ಸರ್ಕಾರ ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದವನ್ನ ತಣ್ಣಗಾಗಲು ಬಿಡುತ್ತಿಲ್ಲ. ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಕರ್ನಾಟಕ ರಾಜ್ಯದೊಂದಿಗೆ ಗಡಿ ವಿವಾದದಲ್ಲಿ ಮಂಗಳವಾರ ನಿರ್ಣಯವನ್ನು ಮಂಡಿಸಲಿರುವ ಕಾರಣ ಮತ್ತೊಮ್ಮೆ ಹೈ ಡ್ರಾಮಾ ಶುರುವಾಗಿದೆ.
ಸೋಮವಾರ ಮಾಜಿ ಸಿಎಂ ಉದ್ಧವ್ ಠಾಕ್ರೆ ವಿವಾದಿತ ಗಡಿ ಪ್ರದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪರಿಹರಿಸುವವರೆಗೆ ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಲಿ ಎಂದು ಸಲಹೆ ನೀಡಿದರು.
ಮಂಗಳವಾರ ಬೆಳಗ್ಗೆ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ವಿಧಾನಸಭೆ ಅಧಿವೇಶನ ಪ್ರಾರಂಭವಾಗುವ ಮೊದಲು ಉದ್ಧವ್ ಠಾಕ್ರೆ ಅವರ ಅಧಿಕಾರಾವಧಿಯಲ್ಲಿ ನಿರ್ಣಯವನ್ನು ಕಂಡುಕೊಳ್ಳಲು ವಿಫಲರಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಇಂದು ಮುಖ್ಯಮಂತ್ರಿಯವರು ಗಡಿ ವಿವಾದದ ಕುರಿತು ನಿರ್ಣಯವನ್ನು ಮಂಡಿಸಲಿದ್ದಾರೆ. ನಿರ್ಣಯವನ್ನು ಬಹುಮತದಿಂದ ಅಂಗೀಕರಿಸಲಾಗುವುದು ಎಂದು ನಾನು ಭಾವಿಸುತ್ತೇನೆ ಎಂದರು..
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇತ್ತೀಚೆಗೆ ಗಡಿ ಸಮಸ್ಯೆ ಕುರಿತು ಎರಡೂ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿದ್ದು, ಆರು ಸದಸ್ಯರ ಸಚಿವರ ಸಮಿತಿಯು ಚರ್ಚೆಯ ಮೇಲ್ವಿಚಾರಣೆ ನಡೆಸಲಿದೆ ಎಂದು ಹೇಳಿದ್ದರು. ಆದರೆ ಅಮಿತ್ ಶಾ ಸೂಚನೆಯನ್ನ ಮಹಾರಾಷ್ಟ್ರ ಸರ್ಕಾರ ಗಾಳಿಗೆ ತೂರಿದೆ.