
ನವದೆಹಲಿ: ಕರ್ನಾಟಕ – ಮಹಾರಾಷ್ಟ್ರ ರಾಜ್ಯಗಳ ನಡುವೆ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ನಾಳೆ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ನಡೆಯುವುದಿಲ್ಲ.
ನ್ಯಾಯಮೂರ್ತಿ ಕೆ.ಎಂ. ಜೋಸೆಫ್ ಅವರು ಬೇರೆ ಪೀಠದಲ್ಲಿ ಬ್ಯುಸಿಯಾಗಿದ್ದಾರೆ. ಅವರು ಸಾಂವಿಧಾನಿಕ ಪೀಠದಲ್ಲಿ ಭಾಗಿಯಾಗಲಿರುವ ಕಾರಣ ನಾಳೆ ಗಡಿ ವಿವಾದ ಪ್ರಕರಣದ ವಿಚಾರಣೆ ನಡೆಯುವುದಿಲ್ಲ.
ಬುಧವಾರ ಸುಪ್ರೀಂ ಕೋರ್ಟ್ ನಲ್ಲಿ ಗಡಿ ಪ್ರಕರಣದ ವಿಚಾರಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಗೆ ಆಗಮಿಸಿ ಸುಪ್ರೀಂ ಕೋರ್ಟ್ ಹಿರಿಯ ವಕೀಲ ಮುಕುಲ್ ರೋಹಟಗಿ ಅವರೊಂದಿಗೆ ಚರ್ಚಿಸಿದ್ದಾರೆ. ಆದರೆ, ನಾಳೆ ವಿಚಾರಣೆ ನಡೆಯುವುದಿಲ್ಲವೆನ್ನಲಾಗಿದೆ.