alex Certify ಕರ್ನಾಟಕ ಬಜೆಟ್ : 14 ಹೊಸ ಯೋಜನೆಗಳನ್ನು ಘೋಷಿಸಿದ ಸಿಎಂ ಸಿದ್ದರಾಮಯ್ಯ! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕರ್ನಾಟಕ ಬಜೆಟ್ : 14 ಹೊಸ ಯೋಜನೆಗಳನ್ನು ಘೋಷಿಸಿದ ಸಿಎಂ ಸಿದ್ದರಾಮಯ್ಯ!

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ದಾಖಲೆಯ 14 ನೇ ಬಾರಿಗೆ ಬಜೆಟ್ ಮಂಡಿಸಿದ್ದು, ಬಜೆಟ್ ನಲ್ಲಿ ಮತ್ತೆ 14 ಹೊಸ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ.

ಹೌದು, ಗ್ಯಾರಂಟಿ ಯೋಜನೆಗಳ ಜೊತೆಗೆ 14 ಹೊಸ ಯೋಜನೆಗಳನ್ನು ಘೋಷಿಸಲಾಗಿದೆ. ಉದ್ಯೋಗಕ್ಕೆ ತೆರಳುವ ಮಹಿಳೆಯರ 6 ವರ್ಷದೊಳಗಿನ ಮಕ್ಕಳ ಆರೋಗ್ಯ, ಪೌಷ್ಠಿಕತೆ ಮತ್ತು ಸುರಕ್ಷತೆ ದೃಷ್ಟಿಯಿಂದ  4 ಸಾವಿರ ಗ್ರಾ.ಪಂಗಳಲ್ಲಿ ಕೂಸಿನ ಮನೆ ಹೆಸರಿನಲ್ಲಿ ಶಿಶುಪಾಲನಾ ಕೇಂದ್ರ ಸ್ಥಾಪನೆಗೆ ರಾಜ್ಯ ಸರ್ಕಾರ ಮುಂದಾಗಿದೆ.

ಉದ್ಯಮ ಶಕ್ತಿ ಯೋಜನೆಯಡಿ 100 ಸ್ಥಳಗಳಲ್ಲಿ ಪೆಟ್ರೋಲ್ ಬಂಕ್ ಸ್ಥಾಪಿಸಿ ಅವುಗಳ ನಿರ್ವಹಣೆ ಹೊಣೆಯನ್ನು ಮಹಿಳಾ ಸಹಕಾರಿ ಸ್ವಸಹಾಯ ಗುಂಪುಗಳಿಗೆ ನೀಡುವ ಘೋಷಣೆ ಮಾಡಲಾಗಿದೆ. ಕೃಷಿ ಕ್ಷೇತ್ರಕ್ಕೆ ನವೋದ್ಯಮ, ಅಹಿಂದ ವರ್ಗದ ನಿರುದ್ಯೋಗಿ ಯುವಜನರಿಗೆ ಸ್ವವಲಂಬಿ ಸಾರಥಿ ಯೋಜನೆ ಮೂಲಕ ನೆರವು, ಸ್ಮಶಾನ ಭೂಮಿಗಳ ಕೊರತೆ ನೀಗಿಸಲು ಶಾಂತಿಧಾಮ ಯೋಜನೆ ಘೋಷಿಸಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...