![](https://kannadadunia.com/wp-content/uploads/2024/02/Karnataka-budjet.jpg)
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಇಂದು ಕರ್ನಾಟಕದ 2024-25ನೇ ಸಾಲಿನ ಬಜೆಟ್ (Karnataka Budget) ಮಂಡಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ನಲ್ಲಿ ರಾಜಧಾನಿ ಬೆಂಗಳೂರಿಗೆ ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಅವುಗಳ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ
ಬೆಂಗಳೂರು ನಗರವನ್ನು ವಿಶ್ವದರ್ಜೆಯ ನಗರವಾಗಿ ಅಭಿವೃದ್ಧಿಪಡಿಸಲು ಬ್ರಾಂಡ್ ಬೆಂಗಳೂರು ಪರಿಕಲ್ಪನೆ ಜಾರಿ.
ಬಿ.ಬಿ.ಎಂ.ಪಿ ಯಲ್ಲಿ ತೆರಿಗೆ ಮತ್ತು ತೆರಿಗೆಯೇತರ ಸಂಪನ್ಮೂಲಗಳನ್ನು ಕ್ರೋಢೀಕರಿಸಲು ಆದ್ಯತೆ: 2024-25ರಲ್ಲಿ 6,000 ಕೋಟಿ ರೂ. ತೆರಿಗೆ ಸಂಗ್ರಹದ ನಿರೀಕ್ಷೆ
ವೈಟ್ ಟಾಪಿಂಗ್ ಕಾಮಗಾರಿ ಪೂರ್ಣಗೊಳಿಸುವುದು. ನಗರದ ಪ್ರಮುಖ 28 on Area Traffic Signal Control System ಅಳವಡಿಕೆ, ಹೆಬ್ಬಾಳ ಜಂಕ್ಷನ್‌ನಲ್ಲಿ ಸುರಂಗ ಮಾರ್ಗ ನಿರ್ಮಾಣ. ಮೊದಲಾದ ಯೋಜನೆಗಳ ಮೂಲಕ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಆದ್ಯತೆ.
ಪೆರಿಫೆರಲ್ ರಿಂಗ್ ರೋಡ್ ಅನ್ನು ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ಎಂಬ ಹೊಸ ಪರಿಕಲ್ಪನೆಯಲ್ಲಿ ಅಭಿವೃದ್ಧಿ ಪಡಿಸಲು ಕ್ರಮ.
ಬೆಂಗಳೂರು ನಗರದಲ್ಲಿ 250 ಮೀಟರ್ ಎತ್ತರದ ಸೈ-ಡೆಕ್ (Sky-Deck) ನಿರ್ಮಾಣಕ್ಕೆ ಕ್ರಮ.
ಬೆಂಗಳೂರು ಮೆಟ್ರೋ ಜಾಲಕ್ಕೆ 2025ರ ಮಾರ್ಚ್ ವೇಳೆಗೆ ಹೆಚ್ಚುವರಿಯಾಗಿ 44 ಕಿ.ಮೀ. ಮಾರ್ಗ ಸೇರ್ಪಡೆ; ಮೆಟ್ರೋ ಯೋಜನೆ ಹಂತ 2 ಮತ್ತು 2ಎ ಯೋಜನೆಯಡಿ ಹೊರವರ್ತುಲ ರಸ್ತೆ- ವಿಮಾನ ನಿಲ್ದಾಣ ಮಾರ್ಗವು 2026ರ ಜೂನ್ ವೇಳೆಗೆ ಪೂರ್ಣ: ನಮ್ಮ ಮೆಟ್ರೋ ಹಂತ-3 ರಡಿ ಅಂದಾಜು 15,611 ಕೋಟಿ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರದ ಅನುಮೋದನೆಗೆ ಸಲ್ಲಿಕೆ: ನಮ್ಮ ಮೆಟ್ರೋ ಹಂತ-3ಎ ರಡಿಯಲ್ಲಿ ಡಿ.ಪಿ.ಆರ್. ಕರಡು ಸಿದ್ದ.
ಬೆಂಗಳೂರು BIEC ನಿಂದ ತುಮಕೂರು ಮತ್ತು ಕೆಐಎಎಲ್ ನಿಂದ ದೇವನಹಳ್ಳಿಗೆ ಮೆಟ್ರೋ ಜಾಲ ವಿಸ್ತರಣೆ ಕುರಿತು ಕಾರ್ಯಸಾಧ್ಯತಾ ವರದಿ ತಯಾರಿಸಲು ಕ್ರಮ.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಸೇವೆಗೆ 1,334 ಹೊಸ ಎಲೆಕ್ಟಿಕ್ ಬಸ್‌ಗಳು ಮತ್ತು 820 ಬಿಎಸ್-6 ಡೀಸೆಲ್ ಬಸ್ಸುಗಳ ಸೇರ್ಪಡೆ.
5.550 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಕಾವೇರಿ ಹಂತ-5 ಯೋಜನೆ ಮೇ 2024 ರಲ್ಲಿ ಕಾರ್ಯಾರಂಭ. 12 ಲಕ್ಷ ಜನರಿಗೆ ಕುಡಿಯುವ ನೀರಿನ ಸೌಲಭ್ಯ. ಒಳಚರಂಡಿ ಕಾಮಗಾರಿ ಡಿಸೆಂಬರ್ 2024 ರಲ್ಲಿ ಪೂರ್ಣ.
441 ಕೋಟಿ ರೂ. ವೆಚ್ಚದಲ್ಲಿ ಒಟ್ಟು 268 ಎಂ.ಎಲ್.ಡಿ. ಸಂಸ್ಕರಣಾ ಸಾಮರ್ಥ್ಯದ 07 ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳ ಉನ್ನತೀಕರಣ.
200 ಕೋಟಿ ರೂ. ವೆಚ್ಚದಲ್ಲಿ ಬಿ.ಬಿ.ಎಂ.ಪಿ ವ್ಯಾಪ್ತಿಗೆ ಸೇರ್ಪಡೆಯಾದ 110 ಗ್ರಾಮಗಳಿಗೆ ಎರಡನೇ ಹಂತದ ಕುಡಿಯುವ ನೀರಿನ ಯೋಜನೆ ಪ್ರಾರಂಭ.
ಬೆಂಗಳೂರು ಹಾಗೂ 10 ಮಹಾನಗರ ಪಾಲಿಕೆಗಳಲ್ಲಿ ರಾತ್ರಿಯ ವೇಳೆ ವ್ಯಾಪಾರ-ವಹಿವಾಟಿನ ಮೇಲಿನ ನಿರ್ಬಂಧವನ್ನು ಬೆಳಗಿನ ಜಾವ ಒಂದು ಗಂಟೆಯವರೆಗೆ ವಿಸ್ತರಣೆ.
ಬೆಂಗಳೂರಿನ ಹೊರವಲಯದಲ್ಲಿರುವ ದೇವನಹಳ್ಳಿ, ನೆಲಮಂಗಲ, ಹೊಸಕೋಟೆ, ದೊಡ್ಡಬಳ್ಳಾಪುರ, ಮಾಗಡಿ ಮತ್ತು ಬಿಡದಿಯಲ್ಲಿ ರಸ್ತೆ ಮತ್ತು ರೈಲು ಸಂಪರ್ಕದೊಂದಿಗೆ ಉಪನಗರ ಟೌನ್‌ಶಿಪ್‌ಗಳ (Satellite Towns) ಅಭಿವೃದ್ಧಿ.