ಬೆಂಗಳೂರು : ಶುಕ್ರವಾರ ಐತಿಹಾಸಿಕ 14 ನೇ ಬಜೆಟ್ ಮಂಡನೆ ಮಾಡಿರುವ ಸಿಎಂ ಸಿದ್ದರಾಮಯ್ಯ, ಮೇಕೆದಾಟು ಯೋಜನೆಗೆ 1,000 ಕೋಟಿ ರೂ. ಅನುದಾನ ಘೋಷಿಸಿದ್ದಾರೆ.
ಮೇಕೆದಾಟು ಯೋಜನೆ ಜಾರಿ ಸಂಬಂಧ ರಾಜ್ಯ ಸರಕಾರ ಬಜೆಟ್ನಲ್ಲಿ 1 ಸಾವಿರ ಕೋಟಿ ಅನುದಾನ ನೀಡಿದೆ. ಮೇಕೆದಾಟು ಯೋಜನೆ ವಿವರವಾದ ಯೋಜನಾ ವರದಿ ಹಾಗೂ ಪರಿಸರ ತೀರುವಳಿ ಪ್ರಸ್ತಾವನೆಯನ್ನು ಈಗಾಗಲೇ ಕೇಂದ್ರ ಸರಕಾರಕ್ಕೆ ಸಲ್ಲಿಸಿದ್ದು,ಶೀಘ್ರವಾಗಿ ತೀರುವಳಿ ಪಡೆಯಲು ರಾಜ್ಯ ಸರ್ಕಾರ ಮುಂದಾಗಿದೆ.
ರಾಜೀವ್ ಗಾಂಧಿ ಆರೋಗ್ಯ ವಿಶ್ವ ವಿದ್ಯಾಲಯದ ವತಿಯಿಂದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಕ್ಷೇತ್ರ ಕನಕಪುರ ತಾಲೂಕಿನಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡಲು ಸರಕಾರ ಮುಂದಾಗಿದೆ.