ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ಮಾದರಿಯಾಗಿವೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಶ್ಲಾಘಿಸಿದ್ದಾರೆ.
ವಿಧಾನಮಂಡಲ ಬಜೆಟ್ ಅಧಿವೇಶನದಲ್ಲಿ ಜಂಟಿ ಸದನ ಉದ್ದೇಶಿಸಿ ಮಾತನಾಡಿದ ರಾಜ್ಯಪಾಲರು ಹೊಸ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಆದ ಅಭಿವೃದ್ಧಿ, ಗ್ಯಾರಂಟಿ ಯೋಜನೆ ಅನುಷ್ಠಾನ, ಬರ ಪರಿಹಾರ ವಿತರಣೆ ಸೇರಿದಂತೆ ಮುನ್ನೋಟ ತೆರೆದಿಟ್ಟರು.
ರಾಜ್ಯದಲ್ಲಿ ಭೀಕರ ಬರಗಾಲ ಆರಂಭವಾಗಿದೆ. ರಾಜ್ಯದ 240 ತಾಲೂಕುಗಳ ಪೈಕಿ 223 ತಾಲೂಕುಗಳು ಬರಪೀಡಿತ ಎಂದು ಘೋಷಿಸಲಾಗಿದೆ. ಅವುಗಳಲ್ಲಿ 196 ತಾಲೂಕುಗಳನ್ನು ತೀವ್ರ ಬರಪೀಡಿತ ಎಂದು ವರ್ಗೀಕರಿಸಲಾಗಿದೆ.
ಕುಡಿಯುವ ನೀರು, ಮೇವಿನ ಲಭ್ಯತೆ ಕಾರ್ಯಕ್ರಮಗಳನ್ನು ಕೈಗೊಳ್ಳಲು 31 ಜಿಲ್ಲೆಗಳಲ್ಲಿ ರಾಜ್ಯ ಸರ್ಕಾರದಿಂದ 324 ಕೋಟಿ ಹಣ ಬಿಡುಗಡೆ ಮಾಡಲಾಗಿದೆ. ಬರ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಕೇಳಿದರೂ ಈವರೆಗೂ ನಯಾಪೈಸೆ ಪರಿಹಾರ ಬಿಡುಗಡೆ ಮಾಡಿಲ್ಲ ಎಂದು ಹೇಳಿದರು.