ಬೆಂಗಳೂರು : ‘ಬಜೆಟ್’ ಮಂಡನೆಗೆ ಕ್ಷಣಗಣನೆ ಆರಂಭವಾಗಿದ್ದು, ಸಿಎಂ ಸಿದ್ದರಾಮಯ್ಯ ಮೈಸೂರು ಪಂಚೆ,, ಶಲ್ಯ ಧರಿಸಿ ವಿಧಾನಸೌಧಕ್ಕೆ ಎಂಟ್ರಿಕೊಟ್ಟಿದ್ದಾರೆ.
ಇಂದು ಬಜೆಟ್ ಮಂಡನೆ ಹಿನ್ನೆಲೆ ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿರುವ ಮುಖ್ಯಮಂತ್ರಿ ನಿವಾಸದಿಂದ ಸಿಎಂ ಸಿದ್ದರಾಮಯ್ಯ ಹೊಸ ಮೈಸೂರು ಪಂಚೆ, ಶಲ್ಯ ಧರಿಸಿ ವಿಧಾನಸೌಧಕ್ಕೆ ಎಂಟ್ರಿಕೊಟ್ಟಿದ್ದಾರೆ.
ಇಂದು ಸಿಎಂ ಸಿದ್ದರಾಮಯ್ಯ ದಾಖಲೆಯ 14ನೇ ಬಜೆಟ್ ಮಂಡನೆ ಮಾಡಲಿದ್ದಾರೆ. ಕಾಂಗ್ರೆಸ್ ಸರ್ಕಾರದ ನೂತನ ಬಜೆಟ್ ಮೇಲೆ ಜನರ ನಿರೀಕ್ಷೆಗಳು ಹೆಚ್ಚಿವೆ.ಬಜೆಟ್ ಮಂಡನೆಗೂ ಮುನ್ನ ಸಿಎಂ ಸಿದ್ದರಾಮಯ್ಯ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಸಭೆಯಲ್ಲಿ ಎಲ್ಲಾ ಶಾಸಕರು ಹಾಜರಾಗಿರುವಂತೆ ಖುದ್ದು ಸಿಎಂ ಸೂಚಿಸಿದ್ದಾರೆ.
ಸದನದಲ್ಲಿ ಒಗ್ಗಟ್ಟು ಪ್ರದರ್ಶನ ಮಾಡಬೇಕು. ವಿಪಕ್ಷಗಳ ಟೀಕೆಗೆ ತಿರುಗೇಟು ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಶಾಸಕರಿಗೆ ತಿಳಿಸಿದ್ದಾರೆ.