ಬೆಂಗಳೂರು: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ 2024- 25 ನೇ ಸಾಲಿನ ಶೈಕ್ಷಣಿಕ ಸಹಾಯಧನ ಸೌಲಭ್ಯ ಪಡೆಯಲು ಆಹ್ವಾನಿಸಿದ್ದ ಅರ್ಜಿ ಸಲ್ಲಿಕೆ ಅವಧಿಯನ್ನು ಜನವರಿ 15ರವರೆಗೆ ವಿಸ್ತರಿಸಲಾಗಿದೆ.
ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತ ಕಾರ್ಮಿಕರ ಇಬ್ಬರು ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಸೌಲಭ್ಯ ನೀಡಲಾಗುವುದು. 2024 -25 ನೇ ಸಾಲಿನ ಪೋಸ್ಟ್ ಮೆಟ್ರಿಕ್ ಶೈಕ್ಷಣಿಕ ಸಹಾಯಧನ ಅರ್ಜಿ ಸಲ್ಲಿಕೆಗೆ ಈ ಹಿಂದೆ 2024ರ ಡಿಸೆಂಬರ್ 31 ಕೊನೆಯ ದಿನವಾಗಿತ್ತು.
ವಿವಿಧ ಕಾರ್ಮಿಕ ಸಂಘಟನೆಗಳಿಂದ ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸಬೇಕೆಂದು ಒತ್ತಾಯ ಮಾಡಿದ ಹಿನ್ನೆಲೆಯಲ್ಲಿ ಮಂಡಳಿ ಕ್ರಮ ಕೈಗೊಂಡಿದ್ದು, ಜನವರಿ 15ರವರೆಗೆ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಲಾಗಿದೆ.