ಬೆಂಗಳೂರು : ಜುಲೈ 15 ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ.
ರಾಜ್ಯದಲ್ಲಿ ವಿವಿಧ ಹಗರಣದ ಬಗ್ಗೆ ವಿಪಕ್ಷಗಳ ಆರೋಪ, ವಿವಿಧ ಯೋಜನೆ, ಕಾಮಗಾರಿ, ಹಣ ಬಿಡುಗಡೆ, ಬಗ್ಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಚರ್ಚೆ ನಡೆಯಲಿದೆ.
ಈ ಬಗ್ಗೆ ಆರ್. ಚಂದ್ರಶೇಖರ್, ಸರ್ಕಾರದ ಜಂಟಿ ಕಾರ್ಯದರ್ಶಿ ಇವರು ಸುತ್ತೋಲೆ ಹೊರಡಿಸಿದ್ದು, ದಿನಾಂಕ: 15.07.2024, ಸೋಮವಾರ ಸಂಜೆ 6 ಗಂಟೆಗೆ ಸಚಿವ ಸಂಪುಟದ 2024ನೇ ಸಾಲಿನ 12 ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ.ಸಭೆಯ ಕಾರ್ಯಸೂಚಿಯನ್ನು ಪ್ರತ್ಯೇಕವಾಗಿ ಕಳುಹಿಸಲಾಗುವುದು ಎಂದಿದ್ದಾರೆ.