‘ಬಾಲ ಗೌರವ’ ಪ್ರಶಸ್ತಿಗಾಗಿ ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ ಅರ್ಜಿ ಆಹ್ವಾನ

ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ 2024-25ನೇ ಸಾಲಿನಲ್ಲಿ ರಾಜ್ಯ, ರಾಷ್ಟ್ರ ಮತ್ತು ಅಂತರ್ರಾಷ್ಟ್ರ ಮಟ್ಟದಲ್ಲಿ ವಿಶೇಷ ಸಾಧನೆಗೈದ 18 ವರ್ಷದ ಒಳಗಿನ ಮಕ್ಕಳಿಗೆ ಬಾಲಗೌರವ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಮಕ್ಕಳು ಕ್ರೀಡೆ, ನೃತ್ಯ, ಬಹುಮುಖ ಪ್ರತಿಭೆ, ನಟನೆ, ಚಿತ್ರಕಲೆ ಹಾಗೂ ವಿಜ್ಞಾನ ಮತ್ತು ಸಂಶೋಧನೆಯಲ್ಲಿ ಹೀಗೆ 07 ಕ್ಷೇತ್ರಗಳಲ್ಲಿ ಅಸಾಧಾರಣಾ ಸಾಧನೆಯನ್ನು ಮಾಡಿ ಪ್ರಶಸ್ತಿ ಪಡೆದ ಪುರಸ್ಕೃತ ಮಗುವಾಗಿರಬೇಕು.

ಇಂತಹ ಮಕ್ಕಳು ಅಕಾಡೆಮಿ ಬಾಲಗೌರವ ಪ್ರಶಸ್ತಿಗಾಗಿ ತಮ್ಮ ಸ್ವಯಂ ದೃಢೀಕೃತ ನಕಲು ದಾಖಲೆಗಳೊಂದಿಗೆ ಹಾಗೂ ಸ್ವವಿವರಗಳನ್ನೊಳಗೊಂಡ ಮನವಿಯೊಂದಿಗೆ ಅರ್ಜಿಯನ್ನು ಆಗಸ್ಟ್ 26 ತಾರೀಖಿನೊಳನ್ನೊಳಗೆ ಅಕಾಡೆಮಿಯ ಕೇಂದ್ರ ಕಛೇರಿ ವಿಳಾಸ: ಯೋಜನಾಧಿಕಾರಿಗಳು, ಕರ್ನಾಟಕ ಬಾಲವಿಕಾಸ ಅಕಾಡೆಮಿ, ಚಂದ್ರಿಕಾ ಲೇಜೌಟ್ ಹಿಂಭಾಗ, ಕೆ.ಎಚ್.ಬಿ ಕಾಲೋನಿ, ಲಕಮನಹಳ್ಳಿ ಧಾರವಾಡ- 580004 ದೂರವಾಣಿ ಸಂ:0836-246590 ಇಲ್ಲಿಗೆ ಪೋಸ್ಟ್ ಮುಖಾಂತರ ತಲುಪುವಂತೆ ಕಳುಹಿಸುವುದು. ನಂತರ ಬಂದ ಅರ್ಜಿಗಳನ್ನು ಪ್ರಶಸ್ತಿಗೆ ಪರಿಗಣಿಸಲಾಗುವುದಿಲ್ಲ. ಹಾಗೇಯೇ ಈಗಾಗಲೇ ಬಾಲಗೌರವ ಪ್ರಶಸ್ತಿ ಪಡೆದವರ ಅರ್ಜಿಗಳನ್ನು ಪ್ರಶಸ್ತಿಗೆ ಪರಿಗಣಿಸಲಾಗುವುದಿಲ್ಲ.

ಪ್ರಶಸ್ತಿಯ ಅರ್ಜಿ ನಮೂನೆ/ಮಾನದಂಡಗಳನ್ನು ಕಛೇರಿಯ ವೆಬ್ಸೈಟ್ ಲಿಂಕ್ https://balavikasaacademy.karnataka.gov.in/ ನಲ್ಲಿ ವೀಕ್ಷಿಸಬಹುದಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read