alex Certify ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ `100 ದಿನ’ದ ಸಂಭ್ರಮ : `ಶತದಿನ’ ಸಾಧನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ `100 ದಿನ’ದ ಸಂಭ್ರಮ : `ಶತದಿನ’ ಸಾಧನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಆಗಸ್ಟ್ 27 ರ ಇಂದಿಗೆ ಅಧಿಕಾರಕ್ಕೆ ಬಂದು 100 ದಿನ ಪೂರೈಸಿದೆ. ಈ ಹಿನ್ನೆಲೆಯಲ್ಲಿ 100 ದಿನಗಳ ಸರ್ಕಾರದ ಸಾಧನೆ ಕುರಿತು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ ” 100 ದಿನಗಳು” ಪೂರೈಸಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾಡಿನ ಮತದಾರರು ನಮ್ಮ ಮೇಲೆ ನಂಬಿಕೆ ಮತ್ತು ಭರವಸೆಯನ್ನಿಟ್ಟು 135 ಸ್ಥಾನಗಳಲ್ಲಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿ ಪೂರ್ಣ ಬಹುಮತದ ಸುಭದ್ರ ಸರ್ಕಾರ ರಚನೆಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಜನರು ನೀಡಿರುವ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು, ಅವರ ನಿರೀಕ್ಷೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತಿದ್ದೇವೆ.

ಗ್ಯಾರಂಟಿ ಮತ್ತು ಅಭಿವೃದ್ಧಿ ಯೋಜನೆಗಳ ಅನುಷ್ಠಾನದ ಜೊತೆಜೊತೆಗೆ ಬುದ್ಧ, ಬಸವ, ಅಂಬೇಡ್ಕರ್, ಕುವೆಂಪು, ಕನಕದಾಸರು, ನಾರಾಯಣ ಗುರು ಮುಂತಾದ ದಾರ್ಶನಿಕರು ತೋರಿದ ಸಮಾನತೆಯ ಹಾದಿಯಲ್ಲಿ ನಾಡನ್ನು ಮುನ್ನಡಿಸಿಕೊಂಡು ಹೋಗುತ್ತಿದ್ದೇವೆ. ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ಸರ್ಕಾರದ ಕಾರ್ಯಕ್ರಮಗಳ ಮೂಲಕ ತಲುಪಬೇಕೆಂಬ ಆಶಯದೊಂದಿಗೆ ಆರಂಭಿಸಿರುವ ನಮ್ಮ ಪಯಣಕ್ಕಿಂದು ಶತಕ ಸಂಭ್ರಮ. ಈ ವಿಶೇಷ ಸಂದರ್ಭದಲ್ಲಿ ನಮ್ಮೊಂದಿಗೆ ಕೈಜೋಡಿಸಿ, ಬೆಂಬಲವಾಗಿ ನಿಂತಿರುವ ನಾಡಿನ ಪ್ರತಿಯೊಬ್ಬರಿಗೂ ಧನ್ಯವಾದಗಳು. ನಿಮ್ಮೆಲ್ಲರ ಸಹಕಾರ ನಿರಂತರವಾಗಿರಲಿ ಎಂದು ಹೇಳಿದ್ದಾರೆ.

ಹಸಿವುಮುಕ್ತ ಕರ್ನಾಟಕ” ನಿರ್ಮಾಣದ ಸಂಕಲ್ಪದೊಂದಿಗೆ ನಾವು ಜಾರಿಗೆ ತಂದಿರುವ ಅನ್ನಭಾಗ್ಯ ಯೋಜನೆಯಡಿ ನಾಡಿನ 1.28 ಕೋಟಿ ಬಡ ಕುಟುಂಬಗಳ ಪ್ರತಿ ವ್ಯಕ್ತಿಗೆ ತಲಾ 10 ಕೆ.ಜಿ ಅಕ್ಕಿಯನ್ನು ಉಚಿತವಾಗಿ ವಿತರಿಸಲು ಉದ್ದೇಶಿಸಲಾಗಿದೆ. ಸದ್ಯ ಪೂರ್ಣ ಪ್ರಮಾಣದಲ್ಲಿ ಅಕ್ಕಿಯ ಲಭ್ಯತೆಯಿಲ್ಲದ ಕಾರಣಕ್ಕೆ ತಲಾ 5 ಕೆ.ಜಿ ಅಕ್ಕಿ ಹಾಗೂ ಇನ್ನುಳಿದ 5 ಕೆ.ಜಿ ಅಕ್ಕಿಯ ಬದಲಿಗೆ ರೂ.170 ಅನ್ನು ಫಲಾನುಭವಿಗಳ ಖಾತೆಗೆ ನೇರ ವರ್ಗಾವಣೆ ಮಾಡಲಾಗಿದೆ.

ನಮ್ಮ ಮೊದಲ ‘100 ದಿನಗಳ’ ಆಡಳಿತದಲ್ಲಿ ನುಡಿದಂತೆ ನಡೆಯುತ್ತಿದ್ದೇವೆ ಎಂದು ಹೆಮ್ಮೆಯಿಂದ ಹೇಳಬಯಸುತ್ತೇನೆ. ಗ್ಯಾರಂಟಿಗಳ ಈಡೇರಿಕೆಯ ಜೊತೆಗೆ ಅಭಿವೃದ್ಧಿಯ ರಥವನ್ನು ಮುನ್ನಡೆಸುತ್ತಿರುವ ನಮ್ಮೊಂದಿಗೆ ನಿಮ್ಮೆಲ್ಲರ ಸಹಕಾರವಿರಲಿ.

ಬೆಲೆಯೇರಿಕೆಯ ಕತ್ತಲು ಸರಿಸಿ ಭರವಸೆಯ ಬೆಳಕು ಹರಿಸುವ ಆಶಯದೊಂದಿಗೆ ನಾವು ಜಾರಿಗೆ ತಂದಿರುವ “ಗೃಹಜ್ಯೋತಿ” ಯೋಜನೆಯಡಿ ನಾಡಿನ ಗೃಹಬಳಕೆದಾರರಿಗೆ 200 ಯುನಿಟ್ ವರೆಗೆ ಉಚಿತ ವಿದ್ಯುತ್ ಅನ್ನು ನೀಡಲಾಗುತ್ತಿದೆ. ಈಗಾಗಲೇ 1.48 ಕೋಟಿ ಕುಟುಂಬಗಳು ಯಶಸ್ವಿಯಾಗಿ ನೋಂದಣಿ ಮಾಡಿಕೊಳ್ಳುವ ಮೂಲಕ ಯೋಜನೆಯ ಲಾಭ ಪಡೆಯುತ್ತಿವೆ.

ನಮ್ಮ ಮೊದಲ ‘100 ದಿನಗಳ’ ಆಡಳಿತದಲ್ಲಿ ನುಡಿದಂತೆ ನಡೆಯುತ್ತಿದ್ದೇವೆ ಎಂದು ಹೆಮ್ಮೆಯಿಂದ ಹೇಳಬಯಸುತ್ತೇನೆ. ಗ್ಯಾರಂಟಿಗಳ ಈಡೇರಿಕೆಯ ಜೊತೆಗೆ ಅಭಿವೃದ್ಧಿಯ ರಥವನ್ನು ಮುನ್ನಡೆಸುತ್ತಿರುವ ನಮ್ಮೊಂದಿಗೆ ನಿಮ್ಮೆಲ್ಲರ ಸಹಕಾರವಿರಲಿ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...