![](https://kannadadunia.com/wp-content/uploads/2024/02/WhatsApp-Image-2024-02-13-at-12.38.41-PM.jpeg)
ಬೆಂಗಳೂರು : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಕರ್ನಾಟಕದ ಸಾಂಸ್ಕೃತಿಕ ನಾಯಕರಾದ “ಶ್ರೀ ಜಗಜ್ಯೋತಿ ಬಸವಣ್ಣ”ನವರ ಭಾವಚಿತ್ರವನ್ನು ಸಿಎಂ ಸಿದ್ದರಾಮಯ್ಯ ಅನಾವರಣಗೊಳಿದ್ದಾರೆ.
ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನ ಭಾವಚಿತ್ರ ಹಾಕುವುದು ಕಡ್ಡಾಯ ಗೊಳಿಸಲಾಗಿದ್ದು, ಜೊತೆಗೆ ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ ಎಂಬುದಾಗಿ ಅದರಲ್ಲಿ ಬರೆಸಿ ಹಾಕುವಂತೆ ಸಿಎಂ ಸಿದ್ಧರಾಮಯ್ಯ ಆದೇಶಿಸಿದ್ದಾರೆ.
ಈ ಕುರಿತಂತೆ ಸಿಎಂ ಸಿದ್ದರಾಮಯ್ಯ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿದ್ದು, ಜಗಜ್ಯೋತಿ ಬಸವೇಶ್ವರ ಎಂದು ಪ್ರಖ್ಯಾತರಾಗಿರುವ ಬಸವಣ್ಣನವರು 12ನೇ ಶತಮಾನದ ವಚನ ಚಳುವಳಿಯ ಹಾಗೂ ಸಾಮಾಜಿಕ ನ್ಯಾಯದ ನಾಯಕತ್ವ ವಹಿಸಿದ್ದರು.