ಮೈಸೂರು : ಮೈಸೂರು ಜಿಲ್ಲೆಯಲ್ಲಿ 6 ಮಂದಿಗೆ ಕೊರೊನಾ ಸೋಂಕು ಧೃಡವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಬಗ್ಗೆ ಮಾಹಿತಿ ನೀಡಿದ ಮೈಸೂರು ಡಿಹೆಚ್ ಒ ಕುಮಾರಸ್ವಾಮಿ ‘ ಬೇರೆ ಬೇರೆ ಆರೋಗ್ಯ ಸಮಸ್ಯೆ ಇರುವವರಿಗೆ ಕೊರೊನಾ ಸೋಂಕು ಧೃಡವಾಗಿದೆ, 6 ಮಂದಿಗೆ ಕೊರೊನಾ ಪಾಸಿಟಿವ್ ಧೃಡವಾಗಿದೆ. ಸದ್ಯ ಸೋಂಕಿತರಿಗೆ ಐಸೋಲೇಷನ್ ಮಾಡಲಾಗಿದೆ ಎಂದರು.
ರಾಜ್ಯದಲ್ಲಿ ಕೊರೊನಾ ಆತಂಕ ಮನೆ ಮಾಡಿದ್ದು, ಎಚ್ಚರಿಕೆಯಿಂದಿರುವಂತೆ, ಮಾಸ್ಕ್ ಧರಿಸುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.